ನವದೆಹಲಿ: ಭಾರತದಲ್ಲಿ ಇಂಧನ ಬೆಲೆ ಏರಿಕೆಯ ಪರ್ವ ಮುಂದುವರೆದಿದ್ದು, 15ನೇ ದಿನವೂ ಗ್ರಾಹಕರು ತಲೆ ಮೇಲೆ ಕೈಯಿಟ್ಟುಕೊಳ್ಳುವಂತಾಗಿದೆ. ಇತ್ತ ನಾಗಾಲ್ಯಾಂಡ್, ಮೇಘಾಲಯ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿಮೆಗೊಳಿಸಿದೆ.
ಇಂದು ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ ಮತ್ತೆ 25 ಪೈಸೆ ಹಾಗೂ ಡೀಸೆಲ್ ದರದಲ್ಲಿ 35 ಪೈಸೆ ಹೆಚ್ಚಳವಾಗಿದೆ. ಹೀಗಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್‌ಗೆ 90.83 ರೂ ಹಾಗೂ ಡೀಸೆಲ್‌ಗೆ 81.32 ರೂ. ಬೆಲೆ ನಿಗದಿಯಾಗಿದೆ. ಈ ದರವು ದೇಶದ ಎಲ್ಲಾ ಮೆಟ್ರೋ ನಗರಗಳಿಗೆ ಅನ್ವಯಿಸುತ್ತದೆ.
ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ತಗ್ಗಿಸುವಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ RBI ಗವರ್ನರ್ ತಾಕೀತು
ಇಂಧನ ಬೆಲೆಗಳು ಸಾಮಾನ್ಯ ಜನರ ಜೇಬಿಗೆ ಹೊರೆಯಾಗುತ್ತಿವೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಪರೋಕ್ಷ ತೆರಿಗೆ ಕಡಿಮೆ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಗವರ್ನರ್ ಶಕ್ತಿಕಾಂತ್ ದಾಸ್ ಒತ್ತಾಯಿಸಿದ್ದಾರೆ.
ಮೇಘಾಲಯವು ಪ್ರತಿ ಲೀಟರ್ ಪೆಟ್ರೋಲ್‌ಗೆ 7.4 ರೂ. ಮತ್ತು ಡೀಸೆಲ್‌ಗೆ 7.1 ರೂ. ಕಡಿತಗೊಳಿಸಿದ್ದು, ನಾಗಾಲ್ಯಾಂಡ್‌ನಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ದರವನ್ನು ಶೇ. 29.80 ರಿಂದ 25ಕ್ಕೆ ಹಾಗೂ ಡೀಸೆಲ್ ಮೇಲಿನ ತೆರಿಗೆ ದರವನ್ನು ಶೇ.17.50 ರಿಂದ 16.50ಕ್ಕೆ ಇಳಿಕೆಯಾಗಿದೆ.