ನವದೆಹಲಿ: ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಂಗಳವಾರ ಸಂಜೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶಾದ್ಯಂತ 1,000ಕ್ಕೂ ಅಧಿಕ ಎಲ್‌ಪಿಜಿ ವಿತರಕರೊಂದಿಗೆ ಸಂವಾದ ನಡೆಸಿದರು.
ಲಾಕ್‌ಡೌನ್ ಸಮಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಮನೆ ಬಾಗಿಲಿಗೆ ತಲುಪಿಸುತ್ತಿರುವ ವಿತರಕರ ಕಾರ್ಯವನ್ನು ಶ್ಲಾಘಿಸಿದರು. ಬಡವರಿಗೆ ಘೋಷಿಸಿದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿ ಪಿಎಂಯುವೈ ಫಲಾನುಭವಿಗಳಿಗೆ ಮೂರು ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಮರ್ಪಕವಾಗಿ ತಲುಪಿಸುವಂತೆ ಮನವಿ ಮಾಡಿದರು.