ETV Bharat Karnataka

ಕರ್ನಾಟಕ

karnataka

ETV Bharat / business

2020-21ನೇ ಸಾಲಿನ ಆರ್ಥಿಕ ಸಮೀಕ್ಷೆ ಮಂಡಿಸಲಿರುವ ವಿತ್ತ ಸಚಿವೆ - Economic Survey 2020-21

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಅದರ ಸಮೀಕ್ಷೆಯ ಬಗ್ಗೆ ತಿಳಿಸಲಿದ್ದಾರೆ.

Finance Minister
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
author img

By

Published : Jan 29, 2021, 10:37 AM IST

ನವದೆಹಲಿ:ಫೆ.1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2020-21 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ದಿನ ಮುಂದೆ ಅಂದರೆ ಇಂದು ಬಜೆಟ್​ ಅಧಿವೇಶನದಲ್ಲಿ 2020-21ರ ಆರ್ಥಿಕ ಸಮೀಕ್ಷೆಯನ್ನು ಸಂಸತ್ತಿನಲ್ಲಿ ತಿಳಿಸಲಿದ್ದಾರೆ.

ಬಜೆಟ್ ಅಧಿವೇಶನದ ಆರಂಭಿಕ ದಿನದಂದು ಪ್ರಸ್ತುತಪಡಿಸಲಾದ ಆರ್ಥಿಕ ಸಮೀಕ್ಷೆಯು ಹಣಕಾಸು ವರ್ಷದಲ್ಲಿ ದೇಶಾದ್ಯಂತ ವಾರ್ಷಿಕ ಆರ್ಥಿಕ ಅಭಿವೃದ್ಧಿಯ ಸಾರಾಂಶವನ್ನು ಒದಗಿಸುತ್ತದೆ. ಈ ಸಮೀಕ್ಷೆ ಮೂಲಸೌಕರ್ಯ, ಕೃಷಿ ಮತ್ತು ಕೈಗಾರಿಕಾ ಉತ್ಪಾದನೆ, ಉದ್ಯೋಗ, ಬೆಲೆಗಳು, ರಫ್ತು, ಆಮದು, ಹಣ ಪೂರೈಕೆ, ವಿದೇಶಿ ವಿನಿಮಯ ಮೀಸಲು, ಭಾರತದ ಆರ್ಥಿಕತೆ ಮತ್ತು ಬಜೆಟ್ ಮೇಲೆ ಪರಿಣಾಮ ಬೀರುವ ಇತರ ಅಂಶಗಳನ್ನು ವಿಶ್ಲೇಷಿಸುತ್ತದೆ.

ಸಮೀಕ್ಷೆಯು ಆರ್ಥಿಕ ಬೆಳವಣಿಗೆಯ ಮುನ್ಸೂಚನೆಗಳನ್ನು ಸಹ ನೀಡುತ್ತದೆ. ಸಮರ್ಥನೆ ಮತ್ತು ಆರ್ಥಿಕತೆಯು ವೇಗವಾಗಿ ವಿಸ್ತರಿಸುತ್ತದೆ ಅಥವಾ ಕ್ಷೀಣಿಸುತ್ತದೆ ಎಂದು ನಂಬಲು ವಿವರವಾದ ಕಾರಣಗಳನ್ನು ನೀಡುತ್ತದೆ. ಕೆಲವೊಮ್ಮೆ, ಇದು ಕೆಲವು ನಿರ್ದಿಷ್ಟ ಸುಧಾರಣಾ ಕ್ರಮಗಳನ್ನು ಒಳಗೊಂಡಿರುತ್ತದೆ.

ಸಂಸತ್ತಿನಲ್ಲಿ ಹಣಕಾಸು ಸಚಿವರು ಆರ್ಥಿಕ ಸಮೀಕ್ಷೆ 2020-21ರ ಪ್ರಸ್ತುತಿಯ ನಂತರ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಮಣಿಯನ್ ಅವರು ಇಂದು ಮಧ್ಯಾಹ್ನ 2.30ಕ್ಕೆ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಸಂಸತ್ತಿನ ಎರಡು ಸದನಗಳ ಜಂಟಿ ಸಭೆಯು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣದೊಂದಿಗೆ ಪ್ರಾರಂಭವಾಗಲಿದೆ. ಅಧಿವೇಶನದ ಮೊದಲ ಭಾಗ ಫೆಬ್ರವರಿ 15 ರವರೆಗೆ ಮುಂದುವರಿಯುತ್ತದೆ. ಅಧಿವೇಶನದ ಎರಡನೇ ಭಾಗವು ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ.

ABOUT THE AUTHOR

...view details