ನವದೆಹಲಿ: ಪಡಿತರ ಅಂಗಡಿಗಳ ಮೂಲಕವೇ ಸಣ್ಣ ಅಡುಗೆ ಅನಿಲ ಸಿಲಿಂಡರ್‌ಗಳ ಮಾರಾಟಕ್ಕೆ ಅವಕಾಶ ನೀಡಲು ಯೋಜಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದರಿಂದ ರೇಷನ್ ಅಂಗಡಿ ಮಾಲೀಕರಿಗೆ ಹೆಚ್ಚಿನ ಆರ್ಥಿಕ ಸ್ಥಿರತೆಯನ್ನು ತರುತ್ತದೆ ಎಂದು ಕೇಂದ್ರ ಪಡಿತರ ಇಲಾಖೆ ಕಾರ್ಯದರ್ಶಿ ಸುಧಾಂಶು ಪಾಂಡೆ ತಿಳಿಸಿದ್ದಾರೆ.
ಎಲ್ಲಾ ರಾಜ್ಯಗಳೊಂದಿಗೆ ಸಭೆ ನಡೆಸಿದ ಅವರು, ಪಡಿತರ ಅಂಗಡಿಗಳ ಮೂಲಕ ಸಣ್ಣ ಅಡುಗೆ ಅನಿಲ ಸಿಲಿಂಡರ್ ಮಾರಾಟಕ್ಕೆ ಅವಕಾಶ ಕಲ್ಪಿಸುವ ಆಲೋಚನೆ ಹೊಂದಿದ್ದೇವೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಆಸಕ್ತಿ ಹೊಂದಿರುವ ರಾಜ್ಯಗಳಲ್ಲಿನ ಪಡಿತರ ಅಂಗಡಿಗಳಿಗೆ ಅಗತ್ಯ ಬೆಂಬಲವನ್ನು ನೀಡುವುದಾಗಿ ಹಣಕಾಸು ಸೇವೆಗಳ ಇಲಾಖೆ ಬಹಿರಂಗಪಡಿಸಿದೆ.