ನವದೆಹಲಿ:ದೇಶಾದ್ಯಂತ ಜಿಎಸ್‌ಟಿ ಸಂಗ್ರಹದಲ್ಲಿನ ತೀವ್ರ ಕುಸಿತ ಮತ್ತು ಆರ್ಥಿಕ ಚಟುವಟಿಕೆಗಳ ಅಡೆತಡೆ ಎದುರಿಸುತ್ತಿರುವ ಕೇಂದ್ರ ಸರ್ಕಾರ, ತನ್ನ ಸಾಲಗಳ ಒಂದು ಭಾಗವನ್ನು ಬಳಸಿಕೊಂಡು ರಾಜ್ಯಗಳಿಗೆ ನೀಡಬೇಕಿರುವ ಜಿಎಸ್‌ಟಿ ಪರಿಹಾರವನ್ನು 6ನೇ ಅಥವಾ ನಂತರದ ವರ್ಷಗಳಲ್ಲಿ ಸೆಸ್ ಸಂಗ್ರಹದ ಮೂಲಕ ಮರುಪಾವತಿಸಲು ಚಿಂತಿಸುತ್ತಿದೆ.
ಜಿಎಸ್‌ಟಿ ಕಾಯ್ದೆ ಪ್ರಕಾರ, ಜುಲೈ 2017ರಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೆ ಬಂದ ನಂತರ ಮೊದಲ ಐದು ವರ್ಷಗಳವರೆಗೆ ಯಾವುದೇ ಆದಾಯ ನಷ್ಟಕ್ಕೆ ರಾಜ್ಯಗಳಿಗೆ ಸಂಪೂರ್ಣ ಪರಿಹಾರದ ಭರವಸೆ ನೀಡಿದೆ. ಕೇಂದ್ರ ಸರ್ಕಾರವು 2016-17 ಮೂಲ ವರ್ಷದಲ್ಲಿ ಪರಿಹಾರ ಮೊತ್ತವನ್ನು ಆದಾಯದ ಮೇಲೆ ಶೇಕಡಾ 14ಕ್ಕೆ ನಿಗದಿ ಪಡಿಸಲಾಗಿದೆ.