ನವದೆಹಲಿ:ಇಂದು ಬಹುನಿರೀಕ್ಷಿತ 2021-22ರ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಪಿ.ಚಿದಂಬರಂ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಕೊರೊನಾ ಸಾಂಕ್ರಾಮಿಕ ಹಾಗೂ ಗಡಿ ಬಿಕ್ಕಟ್ಟಿನ ನಡುವೆ ಆರೋಗ್ಯ ಹಾಗೂ ರಕ್ಷಣಾ ಕ್ಷೇತ್ರಕ್ಕೆ ದೊಡ್ಡ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡುವುದು ಅನಿವಾರ್ಯವಾಗಿದೆ. ಇದರಲ್ಲಿ ಯಾವುದೇ ರೀತಿಯ ಚೌಕಾಸಿ ಮಾಡಲು ಆಗುವುದಿಲ್ಲ. ಆದರೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಸರ್ಕಾರದ ಬಳಿ ಈ ವಲಯಗಳಿಗೆ ಅನುದಾನ ನೀಡಲು ಅಷ್ಟೊಂದು ಹಣವಿದೆಯೇ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.