ಹೈದರಾಬಾದ್:ಕೋವಿಡ್-19 ಸಮಯದಲ್ಲಿ ಕಾಲಕಾಲಕ್ಕೆ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಅಂಗನವಾಡಿ ಕೇಂದ್ರಗಳ ಕಾರ್ಯಚಟುವಟಿಕೆಗೆ ಅನುಮತಿ ನೀಡಲಾಯಿತು.
ಲಾಕ್ಡೌನ್ ಸಂದರ್ಭದಲ್ಲಿ ಅಂಗನವಾಡಿಗಳಿಂದ ಮಕ್ಕಳು, ಮಹಿಳೆಯರು ಮತ್ತು ಹಾಲುಣಿಸುವ ತಾಯಂದಿರಿಗೆ ಆಹಾರ ಸಾಮಗ್ರಿ ಮತ್ತು ಪೌಷ್ಟಿಕ ಆಹಾರಗಳನ್ನು ಪ್ರತಿ 15 ದಿನಗಳಿಗೊಮ್ಮೆ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಯಿತು.
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರು ಕೋವಿಡ್-19 ಜಾಗೃತಿಯಲ್ಲಿ ತೊಡಗಿದ್ದರು. ಮಕ್ಕಳಿಗೆ ಮತ್ತು ಪೋಷಕರಿಗೆ ಸರಿಯಾದ ನೈರ್ಮಲ್ಯ ಮತ್ತು ಆರೋಗ್ಯ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಜವಾಬ್ದಾರಿ ಹೊತ್ತಿದ್ದರು.
ಇದನ್ನೂ ಓದಿ: ಕೊರೊನಾ ವೈರಸ್ ಸೋಂಕಿತ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಬಜೆಟ್ನಲ್ಲಿ ಮದ್ದು!
ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ದೇಶದಲ್ಲಿ ತಿಂಗಳಿಗೆ 3,000 ರೂ.ಗಳಿಂದ 4,500 ರೂ.ಗೆ ಹೆಚ್ಚಿಸಲಾಗಿದೆ. ಎಡಬ್ಲ್ಯುಡಬ್ಲ್ಯು ಗೌರವಧನ ತಿಂಗಳಿಗೆ 2,250 ರೂ.ಯಿಂದ 3,500 ರೂ. ಮತ್ತು ಎಡಬ್ಲ್ಯೂಎಚ್ ತಿಂಗಳಿಗೆ 1,500 ರಿಂದ 2,250 ರೂ.ಗೆ ಏರಿಕೆ ಮಾಡಲಾಗಿದೆ.
ಭಾರತದಲ್ಲಿ ಸಂಗ್ರಹಣೆ ಸಾಮರ್ಥ್ಯ