ಮುಂಬೈ:ಜನವರಿ 29ಕ್ಕೆ ಕೊನೆಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹವು ಒಂದು ವಾರದಲ್ಲಿ ಸುಮಾರು 4.852 ಬಿಲಿಯನ್ ಡಾಲರ್ಗೆ ಏರಿಕೆಯಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಸಾಪ್ತಾಹಿಕ ಅಂಕಿ ಅಂಶಗಳ ಪ್ರಕಾರ, ಜನವರಿ 22ಕ್ಕೆ ಕೊನೆಗೊಂಡ ವಾರದಲ್ಲಿ ಮೀಸಲು ನಿಧಿ 585.334 ಬಿಲಿಯನ್ ಡಾಲರ್ನಿಂದ 590.185 ಬಿಲಿಯನ್ ಡಾಲರ್ಗೆ ಹೆಚ್ಚಳವಾಗಿದೆ.
ಭಾರತದ ವಿದೇಶೀ ವಿನಿಮಯ ಸಂಗ್ರಹವು ವಿದೇಶಿ ಕರೆನ್ಸಿ ಸ್ವತ್ತು (ಎಫ್‌ಸಿಎ), ಚಿನ್ನದ ಮೀಸಲು, ವಿಶೇಷ ಡ್ರಾಯಿಂಗ್ ರೈಟ್ಸ್ (ಎಸ್‌ಡಿಆರ್) ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಜತೆಗೆ ದೇಶದ ಮೀಸಲು ಸ್ಥಾನ ಒಳಗೊಂಡಿದೆ.