ಕರ್ನಾಟಕ

karnataka

ETV Bharat / business

ರಾಜ್ಯ ಬಜೆಟ್: ಗ್ರಾಮೀಣಾಭಿವೃದ್ಧಿಗೆ ನೂತನ ಯೋಜನೆಗಳ ಘೋಷಣೆ - ಕರ್ನಾಟಕ ಬಜೆಟ್​ 2020 ಗ್ರಾಮೀಣಾಭಿವೃದ್ದಿಗೆ ನೂತನ ಯೋಜನೆ

ಸಿಎಂ ಬಿ.ಎಸ್​.ಯಡಿಯೂರಪ್ಪ ಮಂಡಿಸಿರುವ ಬಜೆಟ್​ನಲ್ಲಿ ಗ್ರಾಮೀಣಾಭಿವೃದ್ಧಿಗೆ ನೂತನ ಯೋಜನೆಗಳನ್ನು ಪ್ರಕಟಿಸಿದ್ದು, ನೀರಾವರಿ, ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಒತ್ತು ನೀಡಲಾಗಿದೆ.

ಕರ್ನಾಟಕ ಬಜೆಟ್​ 2020 ಗ್ರಾಮೀಣಾಭಿವೃದ್ದಿ
ಗ್ರಾಮೀಣಾಭಿವೃದ್ದಿ

By

Published : Mar 5, 2020, 1:07 PM IST

ಬೆಂಗಳೂರು: ಸಿಎಂ ಬಿ.ಎಸ್​.ಯಡಿಯೂರಪ್ಪ ಮಂಡಿಸಿರುವ ಬಜೆಟ್​ನಲ್ಲಿ ಗ್ರಾಮೀಣಾಭಿವೃದ್ಧಿಗೆ ನೂತನ ಯೋಜನೆಗಳನ್ನು ಪ್ರಕಟಿಸಿದ್ದು, ನೀರಾವರಿ, ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಒತ್ತು ನೀಡಲಾಗಿದೆ.

ಮನೆ ಮನೆಗೆ ಗಂಗೆ: ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯು ನೀರು ಪೂರೈಸಲು ‘ಮನೆ ಮನೆಗೆ ಗಂಗೆ’ ಎಂಬ ಹೊಸ ಯೋಜನೆ ಘೋಷಿಸಲಾಗಿದೆ. ನೂತನ ಯೋಜನೆಯ ಮೂಲಕ 10 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ. ವಿಜಯಪುರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬೃಹತ್ ಕುಡಿಯುವ ನೀರು ಯೋಜನೆ ಜಾರಿಗೆ ₹ 700 ಕೋಟಿ ಅನುದಾನ ಘೋಷಿಸಲಾಗಿದೆ.

ಗ್ರಾಮೀಣ ಸುಮಾರ್ಗ ಯೋಜನೆ: ಗ್ರಾಮೀಣ ರಸ್ತೆಗಳ ಸುಧಾರಣೆಗೆ ‘ಗ್ರಾಮೀಣ ಸುಮಾರ್ಗ ಯೋಜನೆ’ ಘೋಷಿಸಲಾಗಿದೆ. ಈ ಯೋಜನೆ ಮೂಲಕ 20,000 ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಕ್ರಮಕೈಗೊಳ್ಳಾಗುತ್ತದೆ. ಇದಕ್ಕಾಗಿ 780 ಕೋಟಿ ರೂ. ಮೀಸಲಿಡಲಾಗಿದೆ.

ಇನ್ನು ವಿಶ್ವಬ್ಯಾಂಕ್ ಪ್ರಾಯೋಜಿತ ಸುಜಲಾ ಯೋಜನೆ ಜಾರಿಗೊಳಿಸಿರುವ 12 ಮಳೆ ಆಶ್ರಿತ ಜಿಲ್ಲೆಗಳ 2500 ಗ್ರಾಮಗಳ ಒಂದು ಲಕ್ಷಕ್ಕೂ ಹೆಚ್ಚು ರೈತರಿಗೆ ಭೂ ಸಂಪನ್ಮೂಲ ಯಾದಿಯ ತರಬೇತಿ ನೀಡಿ, ಕಾರ್ಡ್ ವಿತರಿಸಲು 10 ಕೋಟಿ ರೂ. ಅನುದಾನ ನೀಡಲಾಗಿದೆ.

17 ನದಿಗಳಲ್ಲಿ ಮಾಲಿನ್ಯಕ್ಕೆ ಕಡಿವಾಣ ಹಾಕಲು 1690 ಕೋಟಿ ರೂ. ವೆಚ್ಚದಲ್ಲಿ 20 ನಗರ ಪಟ್ಟಣಗಳಲ್ಲಿ ಮಲತ್ಯಾಜ್ಯ ಸಂಸ್ಕರಣ ಘಟಕ ಸ್ಥಾಪನೆಗೆ ಕ್ರಮ. ಇದಕ್ಕಾಗಿ100 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.

ABOUT THE AUTHOR

...view details