ನವದೆಹಲಿ:ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆ ಹೋಳಿ ಹಬ್ಬದ ವೇಳೆ ಸರ್ಕಾರ ನಿರ್ಬಂಧ ಹೇರಿದ ಹಿನ್ನೆಲೆ 35,000 ಕೋಟಿ ರೂ. ನಷ್ಟವನ್ನು ವ್ಯಾಪಾರಿಗಳು ಅನುಭವಿಸಿದ್ದಾರೆಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಮಾಹಿತಿ ನೀಡಿದೆ.
ಕಳೆದ ಕೆಲವು ವರ್ಷಗಳಿಂದ ಭಾರತದ ವ್ಯಾಪಾರಿಗಳು ಹೋಳಿ ಸಂದರ್ಭದಲ್ಲಿ ಸುಮಾರು 50,000 ಕೋಟಿ ರೂ.ಗಳ ಲಾಭವನ್ನು ಗಳಿಸುತ್ತಿದ್ದರು. ಆದರೆ ಈ ವರ್ಷ ಅದರಲ್ಲೂ ನಗರ ಪ್ರದೇಶಗಳಲ್ಲಿ ಆಚರಣೆ ಕಡಿಮೆಯಾಗಿದ್ದು, ವ್ಯಾಪಾರಿಗಳು 35,000 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದಾರೆ ಎಂದು ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ತಿಳಿಸಿದ್ದಾರೆ.
ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇದನ್ನೂ ಓದಿ: ಅಖಿಲೇಶ್ - ಶಿವಪಾಲ್ ಪ್ರತ್ಯೇಕ ಹೋಳಿ ಆಚರಣೆ: ಮುಗಿಯದ ಮುನಿಸು!
ಬಣ್ಣ, ಸಿಹಿತಿಂಡಿಗಳು, ಹೂವುಗಳು, ಒಣ ಹಣ್ಣುಗಳು, ಕುರ್ತಾ - ಪೈಜಾಮಾ, ಸೀರೆ ಹೀಗೆ ಹಲವು ಬಟ್ಟೆಗಳು ಸೇರಿದಂತೆ ವಿವಿಧ ವಸ್ತುಗಳ ಖರೀದಿಯಲ್ಲಿ ಭಾರಿ ಇಳಿಕೆಯಾಗಿದೆ. ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಚರಣೆಗೆ ಮುಂದಾಗಿಲ್ಲ. ಹೋಳಿ ಹಬ್ಬದಂದು ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲು ನಿಷೇಧ ಹೇರಲಾಗಿದೆ. ಹೀಗಾಗಿ ವ್ಯಾಪಾರಿಗಳು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ ಎಂದು ಅವರು ಹೇಳಿದ್ದಾರೆ.