ಕರ್ನಾಟಕ

karnataka

ETV Bharat / business

91ರ ಸುಧಾರಣೆಗಳಿಂದಲೇ ಜಾಗತಿಕ ಶಕ್ತಿಯಾಗಿ ಬೆಳೆದಿದ್ದೇವೆ: ಡಾ.ಮನಮೋಹನ್‌ ಸಿಂಗ್‌

30 ವರ್ಷಗಳ ಹಿಂದೆ ಕೈಗೊಂಡ ಕೈಗೊಂಡ ಆರ್ಥಿಕ ಸುಧಾರಣೆಗಳಿಂದಾಗಿ ಇಂದು ಭಾರತದ ಅನೇಕ ಕಂಪನಿಗಳು ಜಾಗತಿಕ ಶಕ್ತಿಯಾಗಿ ಬೆಳೆದಿವೆ ಎಂದು ಆರ್ಥಿಕ ತಜ್ಞರು, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಹೇಳಿದ್ದಾರೆ.

manmohan singh says 1991 reforms unleashed spirit of free enterprise road ahead more daunting
ಆ ಸುಧಾರಣೆಗಳಿಂದಲೇ ಜಾಗತಿಕ ಶಕ್ತಿಯಾಗಿ ಬೆಳೆದಿದ್ದೇವೆ - ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌

By

Published : Jul 23, 2021, 10:57 PM IST

ನವದೆಹಲಿ: 1991ರಲ್ಲಿ ಕೈಗೊಂಡ ಆರ್ಥಿಕ ಸುಧಾರಣೆಗಳಿಂದಾಗಿ 30 ಲಕ್ಷ ಜನರು ಬಡತನದಿಂದ ಚೇತರಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ಆ ಸುಧಾರಣೆಗಳಿಂದಾಗಿ ಭಾರತದ ಅನೇಕ ಕಂಪನಿಗಳು ಜಾಗತಿಕ ಶಕ್ತಿಯಾಗಿ ಬೆಳೆದಿವೆ. ಆರ್ಥಿಕ ಸುಧಾರಣೆಗಳನ್ನು ಪ್ರಾರಂಭಿಸಿದ 30ನೇ ವರ್ಷಾಚರಣೆಯ ಸಂದರ್ಭದಲ್ಲಿ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ಪಿ.ವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದಾಗ ಹಣಕಾಸು ಸಚಿವರಾಗಿದ್ದ ಮನಮೋಹನ್ ಸಿಂಗ್ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದರು.

30 ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರ ದೇಶದ ಆರ್ಥಿಕತೆಗೆ ಹೊಸ ದಿಕ್ಕು ತೋರಿಸಿತ್ತು. ಕಳೆದ 30 ವರ್ಷಗಳಿಂದ ಸರ್ಕಾರಗಳು ಆರ್ಥಿಕ ಬೆಳವಣಿಗೆಯ ಅದೇ ದಿಕ್ಕಿನಲ್ಲಿ ಸಾಗುತ್ತಿವೆ. 3 ಟ್ರಿಲಿಯನ್ ಆರ್ಥಿಕತೆ ಸಾಧಿಸುವ ಜೊತೆಗೆ ವಿಶ್ವ ಆರ್ಥಿಕ ಶಕ್ತಿಯಾಗಿ ಬೆಳೆಯಲು ಕೃಷಿ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಸಿಂಗ್‌ ತಿಳಿಸಿದ್ದಾರೆ.

ಲಕ್ಷ ಲಕ್ಷ ಉದ್ಯೋಗ ಅವಕಾಶಗಳು

ಬಿಕ್ಕಟ್ಟಿನ ಸಂದರ್ಭದಲ್ಲೂ 30 ಲಕ್ಷ ಜನರನ್ನು ಬಡತನದಿಂದ ಹೊರತರಲಾಗಿದೆ. ಲಕ್ಷಾಂತರ ಯುವಕರಿಗೆ ಉದ್ಯೋಗ ಒದಗಿಸಲಾಗಿದೆ. ಈ ಸುಧಾರಣೆಗಳನ್ನು ಕೈಗೊಳ್ಳುವಲ್ಲಿ ಭಾಗಿಯಾಗಿರುವುದು ಸಂತೋಷವಾಗಿದೆ. ಈ ನಿರ್ಧಾರದ ಬಗ್ಗೆ ಸದಾ ಹೆಮ್ಮೆಪಡುತ್ತೇನೆ ಎಂದರು.

ABOUT THE AUTHOR

...view details