ನವದೆಹಲಿ :2022-23ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಮಧ್ಯಮ ವರ್ಗದ ಜನರ ನಿರೀಕ್ಷೆ ಹುಸಿಯಾಗಿದೆ. ವೈಯಕ್ತಿಕ ಮೂಲ ತೆರಿಗೆ ವಿನಾಯ್ತಿ ಮಿತಿ ಹೆಚ್ಚಳವಾಗಬಹುದೆಂಬ ಕನಸು ಕಂಡಿದ್ದರು. ಆದರೆ, ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಆಗದ ಕಾರಣಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಮೀಮ್ಗಳು ಹರಿದಾಡ್ತಿವೆ.
2014ರ ಬಳಿಕ ಮಂಡನೆಯಾಗಿರುವ ಬಜೆಟ್ಗಳಲ್ಲಿ ಮೂಲ ತೆರಿಗೆ ವಿನಾಯಿತಿ ಮಿತಿಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಕೋವಿಡ್ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಈ ಸಲದ ಬಜೆಟ್ನಲ್ಲಿ ಗಿಫ್ಟ್ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ, ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿರುವ ಬಜೆಟ್ನಲ್ಲಿ ಯಾವುದೇ ಬದಲಾವಣೆಯಾಗದ ಕಾರಣ ಇದೀಗ ಮೀಮ್ಸ್ಗಳು ಸದ್ದು ಮಾಡುತ್ತಿವೆ.
ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿರುವ ಬಜೆಟ್ ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ತರಹೇವಾರಿ ಮೀಮ್ಸ್ ಮಾಡಿದ್ದು, ಬಿಜೆಟ್ನಲ್ಲಿ ಜನಸಾಮಾನ್ಯರ ಕಡಗಣನೆ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.