ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 42ನೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.
ಈ ಸಭೆಯಲ್ಲಿ ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಮತ್ತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಭಾಗವಹಿಸಿದ್ದಾರೆ.

ದೆಹಲಿಯಲ್ಲಿ ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 42ನೇ ಜಿಎಸ್‌ಟಿ ಕೌನ್ಸಿಲ್ ಸಭೆ ಅಧ್ಯಕ್ಷತೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಿದ್ದಾರೆ. ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಮತ್ತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಭಾಗವಹಿಸಿದ್ದರು ಎಂದು ವಿತ್ತ ಸಚಿವಾಲಯ ಟ್ವೀಟ್ ಮಾಡಿದೆ.
ಆಗಸ್ಟ್ 27ರಂದು ನಡೆದ ಕೊನೆಯ ಸಭೆಯಲ್ಲಿ ಜಿಎಸ್‌ಟಿ ಪರಿಹಾರದ ಬಗ್ಗೆ ರಾಜ್ಯಗಳಿಗೆ ಮಂಡಳಿಯು ಎರಡು ಆಯ್ಕೆಗಳನ್ನು ಪ್ರಸ್ತಾಪಿಸಿತ್ತು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಜತೆ ಸಮಾಲೋಚನೆ ನಡೆಸಿ ವಿಶೇಷ ವಿಂಡೋ ಮೂಲಕ 97,000 ಕೋಟಿ ರೂ. ಸಮಂಜಸ ಬಡ್ಡಿದರದಲ್ಲಿ ಸಾಲ ಮತ್ತು ರಾಜ್ಯಗಳು ಒಟ್ಟು 2.35 ಲಕ್ಷ ಕೋಟಿ ರೂ.ಗಳನ್ನು ಮಾರುಕಟ್ಟೆಯಿಂದ ಸಾಲವಾಗಿ ಪಡೆಯಬಹುದು. ಈ ಸಾಲದ ಅಸಲು ಕೇಂದ್ರ ತೀರಿಸುತ್ತದೆ.
ಕೇಂದ್ರ ಇರಿಸಿರುವ ಈ ಆಯ್ಕೆಗಳನ್ನು ಬಿಜೆಪಿಯೇತರ ರಾಜ್ಯ ಸರ್ಕಾರಗಳಾದ ಪಶ್ಚಿಮ ಬಂಗಾಳ, ಕೇರಳ, ದೆಹಲಿ, ತೆಲಂಗಾಣ, ಛತ್ತೀಸಗಢ, ತಮಿಳುನಾಡು ಹಾಗೂ ಕೆಲ ಕೇಂದ್ರಾಡಳಿತ ಪ್ರದೇಶಗಳು ಆಕ್ಷೇಪ ವ್ಯಕ್ತಪಡಿಸಿವೆ.