ನವದೆಹಲಿ:ಮುಂಬರುವ ಕೇಂದ್ರ ಹಣಕಾಸು ಬಜೆಟ್ಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನಾ ಸಭೆ ನಡೆಸಲಿದ್ದಾರೆ.
'ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮುಂಬರುವ 2022-23ನೇ ಸಾಲಿನ ಕೇಂದ್ರ ಬಜೆಟ್ಗೆ ಸಂಬಂಧಿಸಿದಂತೆ ಬುಧವಾರ ಮಧ್ಯಾಹ್ನ ನಡೆಯಲಿರುವ ಬಜೆಟ್ ಪೂರ್ವ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದ್ದು, ದೇಶದ ಪ್ರಮುಖ ಅರ್ಥಶಾಸ್ತ್ರಜ್ಞರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ' ಎಂದು ಕೇಂದ್ರ ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.