ನವದೆಹಲಿ:ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳ ಕಡಿತದ ಆದೇಶವನ್ನು ಹಿಂದಕ್ಕೆ ತೆಗೆದುಕೊಂಡು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಡೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು 2020-2021ರ ಕೊನೆಯ ತ್ರೈಮಾಸಿಕದಲ್ಲಿ ಅಸ್ತಿತ್ವದಲ್ಲಿದ್ದ ದರಗಳಲ್ಲೇ ಮುಂದುವರಿಯಲಿವೆ. ಅಂದರೆ, ಮಾರ್ಚ್ 2021ರ ಹೊತ್ತಿಗೆ ಇದ್ದ ದರಗಳೇ ಇರಲಿವೆ. ನಿನ್ನೆ ಹೊರಡಿಸಲಾದ ಆದೇಶಗಳನ್ನು ಹಿಂಪಡೆಯಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದರು.