ನವದೆಹಲಿ:ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆಗೆ ಕೇಂದ್ರ ಸರ್ಕಾರ ನೀಡಿದ್ದ ಗಡುವು ಇದೇ ಡಿಸೆಂಬರ್ 31ಕ್ಕೆ ಕೊನೆಯಾಗಲಿದೆ.
ಈ ಮೊದಲು ಆದಾಯ ತೆರಿಗೆ ಇಲಾಖೆ ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತಿನಲ್ಲಿ ಸೆಪ್ಟೆಂಬರ್ 30ರೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡಿಸಲು ಸೂಚಿಸಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಜನರು ಸ್ಪಂದಿಸದ ಕಾರಣ ಅಂತಿಮ ದಿನಾಂಕವನ್ನು ಮತ್ತೆ 2019ರ ಡಿಸೆಂಬರ್ 31ಕ್ಕೆ ವಿಸ್ತರಿಸಿತ್ತು.
ಆಧಾರ್ ಜೊತೆ ಪ್ಯಾನ್ ಜೋಡಣೆ ಮಾಡುವ ತನಕ ತೆರಿಗೆ, ಬ್ಯಾಂಕಿಂಗ್, ಹಣಕಾಸು ವ್ಯವಹಾರಗಳಿಗೆ ತೊಡಕಾಗಲಿದೆ. ಬ್ಯಾಂಕಿಂಗ್ ಸೇವೆಯಲ್ಲಿನ ತೊಡಕುಗಳು ಎದುರಾಗದಂತೆ ನೋಡಿಕೊಳ್ಳಲು ಆಧಾರ್- ಪ್ಯಾನ್ ಮಾಡಿಕೊಳ್ಳುವುದು ಉತ್ತಮ.
ಲಿಂಕ್ ಆಗಿದೆಯೇ ಎಂಬುದು ತಿಳಿಯುವುದು ಹೇಗೆ?
* ಆದಾಯ ತೆರಿಗೆ ಇಲಾಖೆಯ ಅಧಿಕೃತ ಇ-ಫೈಲಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡಿ(https://www.incometaxindiaefiling.gov.in)
* ವೆಬ್‌ಸೈಟ್‌ನ ಹೋಮ್‌ಪೇಜ್‌ನ ಎಡಭಾಗದಲ್ಲಿರುವLink Aadhaar ಎನ್ನುವುದನ್ನು ಕ್ಲಿಕ್ ಮಾಡಿ. ಆ ಪುಟದಲ್ಲಿ 'ನೀವು ಈಗಾಗಲೇ ಲಿಂಕ್ ಮಾಡಿದ್ದರೆ, ಅದನ್ನು ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ' ಎಂಬ ಅರ್ಥದ ಸಂದೇಶ ಕಾಣಿಸುತ್ತದೆ. ಅಲ್ಲಿರುವ Link Aadhaar ಕ್ಲಿಕ್ ಮಾಡಿ.
* ನಿಮ್ಮ ಪ್ಯಾನ್ ಮತ್ತು ಆಧಾರ್ ಸಂಖ್ಯೆಯನ್ನು ಅಲ್ಲಿ ಕೊಟ್ಟಿರುವ ಖಾಲಿ ಬಾಕ್ಸ್‌ಗಳಲ್ಲಿ ಭರ್ತಿ ಮಾಡಿ. View Link Aadhaar Status ಕ್ಲಿಕ್ ಮಾಡಿ. ಆಗ ನಿಮ್ಮ ಕಾರ್ಡ್ ಲಿಂಕ್ ಆಗಿದೆಯೇ ಅಥವಾ ಇಲ್ಲವೇ ಎನ್ನುವ ಸಂದೇಶ ಕಾಣಿಸಲಿದೆ.
ಆಧಾರ್- ಪ್ಯಾನ್ ಲಿಂಕ್ ಮಾಡುವುದು ಹೇಗೆ?
* https://www.incometaxindiaefiling.gov.ingಗೆ ಭೇಟಿ ನೀಡಿ.
* ಮುಖಪುಟದ ಎಡಭಾಗದಲ್ಲಿನ ಕೆಂಪು ಅಕ್ಷರದ ಲಿಂಕ್ ಆಧಾರ್(Link Aadhar) ಆಯ್ಕೆ ಕ್ಲಿಕ್ ಮಾಡಿ