ನವದೆಹಲಿ:ದೇಶಾದ್ಯಂತ ಕೋವಿಡ್ ಲಸಿಕೆಯ 2ನೇ ಹಂತದ ಡ್ರೈವ್ ನಡೆಯುತ್ತಿರುವ ಹೊತ್ತಲ್ಲೇ ಕೆಲವು ರಾಜ್ಯಗಳಲ್ಲಿ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ.
ಕೋವಿಡ್ -19 ಪ್ರಕರಣಗಳು ಏರಿಕೆಯ ನಡುವೆಯೂ ಜನರು ಪ್ರಯಾಣವನ್ನು ಮುಂದುವರಿಸಿದ್ದಾರೆ. ಸೋಂಕು ಹೆಚ್ಚುತ್ತಿರುವ ಪ್ರಮುಖ ನಗರಗಳಲ್ಲಿ ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ. ಆದರೂ ಪ್ರಯಾಣಿಕರು ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ನಾಗರಿಕ ವಿಮಾನಯಾನ ಸಚಿವಾಲಯ ಖಡಕ್ ಎಚ್ಚರಿಕೆ ನೀಡಿದೆ.