ನವದೆಹಲಿ :ವಿಶ್ವದಲ್ಲೇ ಮೊಬೈಲ್ ತಯಾರಿಕೆಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಎಲೆಕ್ಟ್ರಾನಿಕ್ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಸಲುವಾಗಿ 3 ಯೋಜನೆಗಳನ್ನು ಘೋಷಿಸಲಾಗಿದೆ ಎಂದು ಕೇಂದ್ರ ಕಾನೂನು, ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ಸ್ಕೀಂ, ಕಾಂಪೊನೆಂಟ್ ಮ್ಯಾನುಫ್ಯಾಕ್ಟರಿಂಗ್ ಸ್ಕೀಂ ಮತ್ತು ಕ್ಲಸ್ಟರ್ ಸ್ಕೀಂ ಎಂದು ವಿಭಾಗಿಸಿದ್ದಾರೆ. ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ಸ್ಕೀಂ ನಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ತಯಾರಿಕೆ ಅಥವಾ ಉತ್ಪಾದನೆಯನ್ನ ಪ್ರೋತ್ಸಾಹಿಸಲಾಗುತ್ತದೆ. ಉಳಿದೆರಡು ಯೋಜನೆಗಳು ಈ ವಲಯವನ್ನು ಅಭಿವೃದ್ಧಿಪಡಿಸುವುದಾಗಿದೆ.