ನವದೆಹಲಿ: "ಭಾರತೀಯ ಕಾನೂನಿನಡಿಯಲ್ಲಿ ಡೇಟಾಗಳ ಗೌಪ್ಯತೆ ಮತ್ತು ಭದ್ರತಾ ನಿಯಮಗಳನ್ನು ಅನುಸರಿಸಿಕೊಂಡು ಬಂದಿದ್ದೇವೆ. ಭಾರತದ ಬಳಕೆದಾರರ ಯಾವುದೇ ಮಾಹಿತಿಯನ್ನು ಚೀನಾ ಸರ್ಕಾರ ಸೇರಿದಂತೆ ಯಾವುದೇ ವಿದೇಶಿ ಸರ್ಕಾರದೊಂದಿಗೆ ಹಂಚಿಕೊಂಡಿಲ್ಲ" ಎಂದು ಟಿಕ್ಟಾಕ್ ಹೇಳಿದೆ.
ಪೂರ್ವ ಲಡಾಖ್ನ ಗಾಲ್ವಾನ್ ಗಣಿವೆಯಲ್ಲಿ ನಡೆದ ಸಂಘರ್ಷದಲ್ಲಿ 22 ಭಾರತೀಯ ಯೋಧರು ಹುತಾತ್ಮರಾದ ಬಳಿಕ ಚೀನಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡುವಂತೆ ದೇಶದೆಲ್ಲೆಡೆ ಕೂಗು ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ರಾಷ್ಟ್ರೀಯ ಭದ್ರತೆ ಮತ್ತು ಗೌಪ್ಯತೆ ದೃಷ್ಟಿಯಿಂದ ಭಾರತ ಸರ್ಕಾರ ಸೋಮವಾರ ಟಿಕ್ಟಾಕ್, ಯುಸಿ ಬ್ರೌಸರ್ ಸೇರಿದಂತೆ ಚೀನಾದ 59 ಆ್ಯಪ್ಗಳನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಪ್ರತಿಕ್ರಿಯೆ ಹಾಗೂ ಸ್ಪಷ್ಟೀಕರಣ ನೀಡುವಂತೆ ಸರ್ಕಾರ ಸೂಚಿಸಿರುವುದಾಗಿ ಟಿಕ್ಟಾಕ್ ಇಂಡಿಯಾ ಮುಖ್ಯಸ್ಥ ನಿಖಿಲ್ ಗಾಂಧಿ ಹೇಳಿದ್ದಾರೆ.