ಕರ್ನಾಟಕ

karnataka

ETV Bharat / business

ಆಗಸ್ಟ್​ಗೂ ಮುನ್ನ ಅಂತಾರಾಷ್ಟ್ರೀಯ ವಿಮಾನ ಸೇವೆ ಮರು ಆರಂಭ: ಸಚಿವ ಹರ್ದೀಪ್ ಸಿಂಗ್​

ಆಗಸ್ಟ್‌ ಅಥವಾ ಸೆಪ್ಟೆಂಬರ್ ಒಳಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನಾರಂಭಿಸುವ ಬಗ್ಗೆ ಪೂರ್ಣ ಭರವಸೆಯಿದೆ. ಪೂರ್ಣ ಪ್ರಮಾಣದಲ್ಲಿ ಅಲ್ಲದಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಆರಂಭವಾಗಲಿದೆ. ಯಾವ ದಿನ ಎಂಬುದನ್ನು ಈಗಲೇ ಖಚಿತವಾಗಿ ಹೇಳಲಾಗದು. ಪರಿಸ್ಥಿತಿ ನೋಡಿಕೊಂಡು ಆರಂಭಿಸಲಾಗುವುದು ಎಂದು ಫೇಸ್​ಬುಕ್​ನಲ್ಲಿ ಹೇಳಿದ್ದಾರೆ.

international flights
ಅಂತಾರಾಷ್ಟ್ರೀಯ ವಿಮಾನ

By

Published : May 23, 2020, 5:57 PM IST

ನವದೆಹಲಿ: ಆಗಸ್ಟ್ ತಿಂಗಳಿಗೂ ಮುನ್ನ ಹೆಚ್ಚಿನ ಸಂಖ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಆರಂಭಿಸಲು ಭಾರತ ಪ್ರಯತ್ನಿಸಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್ ಸಿಂಗ್ ಪುರಿ ಶನಿವಾರ ಹೇಳಿದ್ದಾರೆ.

ಕೊರೊನಾ ವೈರಸ್ ಪ್ರೇರೇಪಿತ ಲಾಕ್​ಡೌನ್​ನಿಂದಾಗಿ​ ಮಾರ್ಚ್ 25ರಿಂದ ದೇಶಿ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.

ಆಗಸ್ಟ್‌ ಅಥವಾ ಸೆಪ್ಟೆಂಬರ್ ಒಳಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭಿಸುವ ಬಗ್ಗೆ ಪೂರ್ಣ ಭರವಸೆಯಿದೆ. ಪೂರ್ಣ ಪ್ರಮಾಣದಲ್ಲಿ ಅಲ್ಲದಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಆರಂಭವಾಗಲಿದೆ. ಯಾವ ದಿನ ಎಂಬುದನ್ನು ಈಗಲೇ ಖಚಿತವಾಗಿ ಹೇಳಲಾಗದು. ಪರಿಸ್ಥಿತಿ ನೋಡಿಕೊಂಡು ಆರಂಭಿಸಲಾಗುವುದು ಎಂದು ಫೇಸ್​ಬುಕ್​ನಲ್ಲಿ ಹೇಳಿದ್ದಾರೆ.

ವೈರಸ್ ಊಹಿಸಬಹುದಾದ ರೀತಿಯಲ್ಲಿ ವರ್ತಿಸಿದರೆ, ನಾವು ವ್ಯವಸ್ಥೆಗಳನ್ನು ಮಾಡಲು ಸಾಧ್ಯವಾಗುತ್ತದೆ. ನಾವು ವೈರಸ್​ನೊಂದಿಗೆ ಬದುಕಲು ಸಾಧ್ಯವಾದರೆ, ಅಂತಾರಾಷ್ಟ್ರೀಯ ಕಾರ್ಯಾಚರಣೆಯನ್ನು ಪುನರಾರಂಭಿಸಲು ನಾವು ಆಶಿಸುತ್ತೇವೆ ಎಂದರು.

ABOUT THE AUTHOR

...view details