ನವದೆಹಲಿ:ಕೊರೊನಾ ಸಾಂಕ್ರಾಮಿಕ ನಡುವೆ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಸಂಪತ್ತಿನ ಗಳಿಕೆಯಲ್ಲಿ ಮೈಲಿಗಲ್ಲು ಸಾಧಿಸಿದ್ದು, ಬ್ಲೂಮ್ಬರ್ಗ್ ಬಿಲಿಯನೇರ್ ಸೂಚ್ಯಂಕದಲ್ಲಿ ವಿಶ್ವದಲ್ಲಿ ಅತ್ಯಧಿಕ ಸಂಪತ್ತಿನ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಅದಾನಿ ಸಂಪತ್ತು ಶೇ 50ರಷ್ಟು ಹೆಚ್ಚಾಗಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.
ಬ್ಲೂಂಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಉದ್ಯಮಿ ಗೌತಮ್ ಅದಾನಿ ಅವರ ನಿವ್ವಳ ಮೌಲ್ಯವು 2021ರಲ್ಲಿ 16.2 ಬಿಲಿಯನ್ ಡಾಲರ್ನಷ್ಟು ಹೆಚ್ಚಳವಾಗಿ 50 ಬಿಲಿಯನ್ ಡಾಲರ್ಗೆ ಏರಿದೆ. ಇದು ಅವರನ್ನು ವರ್ಷದ ಅತಿಹೆಚ್ಚು ಸಂಪತ್ತು ಗಳಿಸಿದವರಲ್ಲಿ ಮೊದಲಿಗರನ್ನಾಗಿ ಮಾಡಿದೆ.