ನವದೆಹಲಿ: ಯುಪಿಎ ಸರ್ಕಾರದ ಅವಧಿಯಲ್ಲಿ ಯೆಸ್ ಬ್ಯಾಂಕ್‌ನಲ್ಲಿ ನಡೆದ ಸಂಗತಿಗಳಿಗೆ ಆ ಸರ್ಕಾರವೇ ಉತ್ತರಿಸಬೇಕು ಎಂದು ಹೇಳಿಕೆ ನೀಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಪ್ರತಿಕ್ರಿಯೆ ನೀಡಿದ್ದಾರೆ.
ಚಿದಂಬರಂ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಆರು ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ. ಹಣಕಾಸು ಸಂಸ್ಥೆಗಳನ್ನು ನಿಯಂತ್ರಿಸುವ ಅವರ ಸಾಮರ್ಥ್ಯವು ಬಹಿರಂಗವಾಗಿದೆ. ಮೊದಲು ಪಿಎಂಸಿ ಬ್ಯಾಂಕ್ ಆಯಿತು. ಈಗ ಯೆಸ್ ಬ್ಯಾಂಕ್ ಆಗಿದೆ. ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲವೇ? ಅದು ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬಹುದೇ? ಲೈನ್ನಲ್ಲಿ ಮೂರನೇ ಬ್ಯಾಂಕ್ ಏನಾದರು ಇದೆಯೇ ಎಂದು ಪ್ರಶ್ನಿಸಿದ್ದಾರೆ.