ಕರ್ನಾಟಕ

karnataka

ETV Bharat / business

ಯೆಸ್​ ಬ್ಯಾಂಕ್ ಸಂಸ್ಥಾಪಕನ ಮನೆ ಮೇಲೆ ED ಅಧಿಕಾರಿಗಳಿಂದ ದಾಳಿ

ವಸೂಲಾಗದ ಸಾಲದ ಪ್ರಮಾಣದಲ್ಲಿ ಏರಿಕೆಯಿಂದಾಗಿ ತೀವ್ರವಾದ ಯೆಸ್​ ಬ್ಯಾಂಕ್ ಹಣಕಾಸಿನ ಬಿಕ್ಕಟ್ಟಿಗೆ ಒಳಗಾಯಿತು. ಹಣದ ವಹಿವಾಟಿನ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಇಡಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಶೋಧ ಕಾರ್ಯ ನಡೆಸುತ್ತಿದ್ದಾರೆ.

ED
ಇಡಿ

By

Published : Mar 6, 2020, 11:17 PM IST

ಮುಂಬೈ: ತೀವ್ರವಾದ ಹಣಕಾಸಿನ ಬಿಕ್ಕಟ್ಟಿಗೆ ಸಿಲುಕಿರುವ ಯೆಸ್​ ಬ್ಯಾಂಕ್​ ಸಂಸ್ಥಾಪಕನ ಮನೆಯ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮುಂಬೈನಲ್ಲಿರುವ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್​ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಶೋಧಕಾರ್ಯ ನಡೆಸುತ್ತಿದ್ದಾರೆ.

ಯೆಸ್​ ಬ್ಯಾಂಕ್​ ತನ್ನ ವಸೂಲಾಗದ ಸಾಲದ ಪ್ರಮಾಣದಲ್ಲಿ ಏರಿಕೆಯಿಂದಾಗಿ ತೀವ್ರವಾದ ಹಣಕಾಸಿನ ಬಿಕ್ಕಟ್ಟಿಗೆ ಒಳಗಾಯಿತು. ಹಣದ ವಹಿವಾಟಿನ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಶೋಧಕಾರ್ಯ ನಡೆಸುತ್ತಿದ್ದಾರೆ.

ABOUT THE AUTHOR

...view details