ನವದೆಹಲಿ: ಕಲ್ಲಿದ್ದಲು ಕಳ್ಳಸಾಗಣೆ ಆರೋಪ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ 40 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ತಂಡ (ಸಿಬಿಐ) ದೊಡ್ಡ ಪ್ರಮಾಣ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲ್ಲಿದ್ದಲು ಕಳ್ಳಸಾಗಣೆ ದೂರು: 3 ರಾಜ್ಯಗಳ 40 ಸ್ಥಳಗಳ ಮೇಲೆ ಸಿಬಿಐ ದಾಳಿ
ಮೂರು ರಾಜ್ಯಗಳಲ್ಲಿ ಈಗಾಗಲೇ 40 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಅಕ್ರಮ ಮಾರಾಟ ಮತ್ತು ಕಲ್ಲಿದ್ದಲು ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಕೆಲವು ವರ್ತಕರ ಮೇಲೆ ತನಿಖಾ ತಂಡ ದಾಳಿ ನಡೆಸಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐ
ಮೂಲತಃ ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು ಕಳ್ಳಸಾಗಣೆ ಬಗ್ಗೆ ಹೊಸ ಪ್ರಕರಣ ದಾಖಲಿಸಿಕೊಂಡ ಸಿಬಿಐ, ರಾಜ್ಯಾದ್ಯಂತ ವ್ಯಾಪಕ ಶೋಧಕಾರ್ಯ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಈಗಾಗಲೇ 40 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಅಕ್ರಮ ಮಾರಾಟ ಮತ್ತು ಕಲ್ಲಿದ್ದಲು ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಕೆಲವು ವರ್ತಕರ ಮೇಲೆ ತನಿಖಾ ತಂಡ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.