ನವದೆಹಲಿ: ದೇಶಾದ್ಯಂತ ಕೊರೊನಾ ಎರಡನೇ ಅಲೆ ಪ್ರಕರಣಗಳ ಸಂಖ್ಯೆ ಯಥೇಚ್ಛವಾಗಿ ಏರಿಕೆ ಆಗುತ್ತಿದ್ದು, ಭಾರತೀಯ ರೈಲ್ವೆ ಮಂಡಳಿಯು ತನ್ನ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದಾಗಿ ತಿಳಿಸಿದೆ.
ಕೊರೊನಾ ಸೋಂಕಿನ (ಕೋವಿಡ್ -19) ವಿರುದ್ಧ ಕೇಂದ್ರ ಕೈಗೊಂಡ ತಡೆಗಟ್ಟುವ ಕ್ರಮಗಳಿಗೆ ಅನುಗುಣವಾಗಿ, ರೈಲುಗಳು ಮತ್ತು ನಿಲ್ದಾಣಗಳ ಆವರಣದಲ್ಲಿ ಫೇಸ್ ಮಾಸ್ಕ್ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬರುತ್ತಿದೆ. ಹೀಗಾಗಿ, ಮಾಸ್ಕ್ ಧರಿಸದೆ ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿ ಓಡಾಡುವ ಜನರಿಗೆ 500 ರೂ. ದಂಡ ವಿಧಿಸಲಾಗುತ್ತಿದೆ ಎಂದು ಹೇಳಿದೆ.