ನವದೆಹಲಿ:ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ದೇಶೀಯ ಕಾರು ತಯಾರಕ ಮಾರುತಿ ಸುಜುಕಿ ಇಂಡಿಯಾ (ಎಂಎಸ್‌ಐ) ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಅದರ ಉತ್ಪಾದನಾ ಸಾಮರ್ಥ್ಯದಲ್ಲಿ ಬದಲಾವಣೆ ಮಾಡಲು ತೀರ್ಮಾನಿಸಿದೆ.
ದೇಶದಲ್ಲಿನ ಆಮ್ಲಜನಕದ ಅವಶ್ಯಕತೆಗಳನ್ನು ಪೂರೈಸಲು ಕೆಲವು ಪ್ಲಾಂಟ್ಗಳಲ್ಲಿ ಉತ್ಪಾದನೆಯನ್ನು ನಿಲ್ಲಿಸಿದೆ. ಅನೇಕ ರಾಜ್ಯಗಳಲ್ಲಿ ಲಾಕ್‌ಡೌನ್‌ಗಳು ಮತ್ತು ಕರ್ಫ್ಯೂ ಹೇರಿರುವುದು ಮಾರಾಟದ ಮೇಲೆ ಪರಿಣಾಮ ಬೀರಿದೆ ಎಂದು ಕಂಪನಿಯ ಅಧ್ಯಕ್ಷ ಆರ್.ಸಿ.ಭಾರ್ಗವ ಬ್ಲೂಮ್‌ಬರ್ಗ್‌ಗೆ ತಿಳಿಸಿದ್ದಾರೆ.
ಬಹುತೇಕ ಅರ್ಧಕ್ಕಿಂತ ಹೆಚ್ಚಿನ ಪ್ಲಾಂಟ್ಗಳನ್ನು ಮುಚ್ಚಲಾಯಿತು. ಶೇ 50ರಿಂದ 60ರಷ್ಟು ಸಾಮರ್ಥ್ಯದಲ್ಲಿ ಕಾರುಗಳನ್ನು ಉತ್ಪಾದಿಸುವ ಸ್ಥಿತಿಯಲ್ಲಿ ನಾವು ಇನ್ನೂ ಇದ್ದೇವೆ ಎಂದರು.