ಕರ್ನಾಟಕ

karnataka

ETV Bharat / business

ರೈಲ್ವೆ ನಿಲ್ದಾಣದಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಟಾಯ್ಲೆಟ್ ಪೈಪ್‌ಲೈನ್ ಜೋಡಣೆ! -  ರೈಲ್ವೆ ಸ್ಟೇಷನ್ ಮಾಸ್ಟರ್ ಅಮಾನತು

ಖಾಸಗಿ ಸಂಸ್ಥೆಯ ನೈರ್ಮಲ್ಯ ಕಾರ್ಮಿಕರೊಬ್ಬರು ಶೌಚಾಲಯ ಪೈಪ್‌ಲೈನ್ ಅನ್ನು ಕುಡಿಯುವ ನೀರಿನ ಟ್ಯಾಂಕ್‌ಗೆ ಜೋಡಿಸಿದ್ದಾರೆ. ದೋಷ ಸರಿಪಡಿಸಿದ ನಂತರ ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಅದರ ಸಾಮರ್ಥ್ಯ ಪರೀಕ್ಷಿಸಲಾಯಿತು. ಸ್ಟೇಷನ್ ಮಾಸ್ಟರ್ ಚೌಥ್ಮಲ್ ಮೀನಾ ಅವರನ್ನು ಅಮಾನತುಗೊಳಿಸಲಾಗಿದೆ.

Rly stn
Rly stn

By

Published : Mar 7, 2021, 7:56 PM IST

ಮಾಂಡ್‌ಸೌರ್:ಹೊರಗುತ್ತಿಗೆ ನೈರ್ಮಲ್ಯ ಕಾರ್ಮಿಕರೊಬ್ಬರು ಕುಡಿಯುವ ನೀರಿನ ಟ್ಯಾಂಕ್‌ಗೆ ಶೌಚಾಲಯದ ಪೈಪ್‌ಲೈನ್ ಜೋಡಿಸಿದ ಹಿನ್ನೆಲೆಯಲ್ಲಿ ರೈಲ್ವೆ ಸ್ಟೇಷನ್ ಮಾಸ್ಟರ್‌ ಅಮಾನತು ಆಗಿದ್ದಾರೆ.

ಮಧ್ಯಪ್ರದೇಶದ ಮಾಂಡ್‌ಸೌರ್ ಜಿಲ್ಲೆಯಲ್ಲಿ ಕಾರ್ಮಿಕ ಮಾಡಿದ ಪ್ರಮಾದಕ್ಕೆ ಸ್ಟೇಷನ್​ ಮಾಸ್ಟರ್​ ಚೌಥ್ಮಲ್ ಮೀನಾ ಅವರನ್ನು ಅಮಾನತುಗೊಳಿಸಲಾಗಿದೆ.

ಮಾರ್ಚ್ 1ರಂದು ರೈಲ್ವೆಯ ಕೋಟಾ ವಿಭಾಗದ ವ್ಯಾಪ್ತಿಗೆ ಬರುವ ಗರೋತ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಅಜಯ್ ಕುಮಾರ್ ಪಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲಿಯಂ ಉತ್ಪನ್ನ ಜಿಎಸ್​ಟಿಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನ: ಹೆಚ್​ಡಿಕೆ

ಖಾಸಗಿ ಸಂಸ್ಥೆಯ ನೈರ್ಮಲ್ಯ ಕಾರ್ಮಿಕರೊಬ್ಬರು ಶೌಚಾಲಯ ಪೈಪ್‌ಲೈನ್ ಅನ್ನು ಕುಡಿಯುವ ನೀರಿನ ಟ್ಯಾಂಕ್‌ಗೆ ಜೋಡಿಸಿದ್ದಾರೆ. ದೋಷ ಸರಿಪಡಿಸಿದ ನಂತರ ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಅದರ ಸಾಮರ್ಥ್ಯ ಪರೀಕ್ಷಿಸಲಾಯಿತು. ಸ್ಟೇಷನ್ ಮಾಸ್ಟರ್ ಚೌಥ್ಮಲ್ ಮೀನಾ ಅವರನ್ನು ಅಮಾನತುಗೊಳಿಸಲಾಗಿದೆ. ಸ್ವಚ್ಛತಾ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಪಾಲ್ ಮಾಹಿತಿ ನೀಡಿದರು.

ABOUT THE AUTHOR

...view details