ನವದೆಹಲಿ: ಸರ್ಕಾರಿ ಸ್ವಾಮ್ಯದ 10 ಬ್ಯಾಂಕುಗಳ ವಿಲೀನ ಪ್ರಕ್ರಿಯೆಯು ಏಪ್ರಿಲ್ 1ರಿಂದ ಆರಂಭವಾಗಲಿದ್ದು, ಇದರ ಸಿದ್ಧತೆ ಪರಿಶೀಲಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಗುರುವಾರ) ವಿಲೀನವಾಗುವ ಬ್ಯಾಂಕ್ಗಳ ಮುಖ್ಯಸ್ಥರ ಜತೆ ಸಭೆ ನಡೆಸಿದರು.
ವಿಲೀನವಾಗುವ ಬ್ಯಾಂಕ್ಗಳು ಸಾಲದ ನೀಡಿಕೆಯು ಯಾವುದೇ ಅಡೆತಡೆಗಳನ್ನು ಹೊಂದಬಾರದು ಹಾಗೂ ಗ್ರಾಹಕರಿಗೆ ಗರಿಷ್ಠ ಸೌಲಭ್ಯದ ಸೇವೆಗಳು ದೊರೆಯಬೇಕು ಎಂದು ಸೀತಾರಾಮನ್ ಸಲಹೆ ನೀಡಿದರು.
ಸಭೆಯಲ್ಲಿ ಆಂಧ್ರ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯಾಧಿಕರಗಳ ಜೊತೆ ಸಭೆ ನಡೆಸಿದರು.
ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ (ಒಬಿಸಿ) ಮತ್ತು ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ಅನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಜೊತೆಗೆ ವಿಲೀನಗೊಳಿಸಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಬಳಿಕ ಪಿಎನ್‌ಬಿ ಭಾರತದ ಎರಡನೇ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಲಿದೆ.
ಸಿಂಡಿಕೇಟ್ ಬ್ಯಾಂಕ್ ಅನ್ನು ಕೆನರಾ ಬ್ಯಾಂಕ್‌ನೊಂದಿಗೆ ವಿಲೀನಗೊಳಿಸಲಾಗುತ್ತಿದ್ದು, ಇದು ಭಾರತದ ನಾಲ್ಕನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಲಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಒಗ್ಗೂಡಿಸಿ ಐದನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ರಚಿಸಲಾಗುತ್ತಿದೆ.