ನವದೆಹಲಿ: ಫೋರ್ಬ್ಸ್ ನಿಯತಕಾಲಿಕೆ ಪ್ರಕಟಿಸಿರುವ 2019ರ ವಿಶ್ವದ ಅತ್ಯಂತ ಪ್ರಭಾವಿ 100 ಮಹಿಳೆಯರ ಪಟ್ಟಿಯಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ.
ವಿಶ್ವದ 100 ಪ್ರಭಾವಿ ಮಹಿಳೆಯರಲ್ಲಿ ಕರ್ನಾಟಕ ರಾಜ್ಯಸಭಾ ಸಂಸದೆ/ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಚ್‌ಸಿಎಲ್ ಕಾರ್ಪೊರೇಷನ್ನ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಶ್ನಿ ನಾಡರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕ ಕಿರಣ್ ಮಜುಂದಾರ್ ಶಾ ಅವರು ಸ್ಥಾನ ಪಡೆದಿದ್ದಾರೆ.
‘ವಿಶ್ವದ 100 ಅತ್ಯಂತ ಪ್ರಭಾವಶಾಲಿ ಮಹಿಳೆಯರ’ ಪಟ್ಟಿಯಲ್ಲಿ ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅಗ್ರಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷ ಕ್ರಿಸ್ಟೀನ್ ಲಗಾರ್ಡ್ ಮತ್ತು ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಮೂರನೇ ಸ್ಥಾನದಲ್ಲಿದ್ದಾರೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ 29ನೇ ಸ್ಥಾನ ಪಡೆದಿದ್ದಾರೆ.
ವಿಶ್ವದ 100 ಪ್ರಭಾವಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಎಚ್‌ಸಿಎಲ್ ಕಾರ್ಪೊರೇಷನ್ನ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಶ್ನಿ ನಾಡರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕ ಕಿರಣ್ ಮಜುಂದಾರ್ ಶಾ ಅವರು ಸ್ಥಾನ ಪಡೆದಿದ್ದಾರೆ.
ಮೊದಲ ಬಾರಿಗೆ ಪೂರ್ಣಪ್ರಮಾಣದ ಹಣಕಾಸು ಖಾತೆ ಜವಾಬ್ದಾರಿ ವಹಿಸಿಕೊಂಡ ಸೀತಾರಾಮನ್ ಅವರು 34ನೇ ಸ್ಥಾನ ಪಡೆದಿದ್ದಾರೆ. ರೋಶ್ನಿ ನಾಡರ್ ಮಲ್ಹೋತ್ರಾ ಅವರು 54ನೇ ಹಾಗೂ ಕಿರಣ್ ಮಜುಂದಾರ್ ಶಾ ಅವರು 69ನೇ ಸ್ಥಾನದಲ್ಲಿದ್ದಾರೆ.