ನವದೆಹಲಿ:ರೈಲ್ವೆ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಕುರಿತು ಕಳೆದ ಕೆಲವು ವರ್ಷಗಳಿಂದ ವಾದ-ಪ್ರತಿವಾದಗಳು ನಡೆಯುತ್ತಿದ್ದು, ಈ ಕುರಿತು ಇಂದು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ ನೀಡಿದ್ದಾರೆ.
'ಯಾವುದೇ ಕಾರಣಕ್ಕೂ ರೈಲ್ವೆ ಇಲಾಖೆಯನ್ನು ಖಾಸಗೀಕರಣಗೊಳಿಸುವ ಅಥವಾ ಖಾಸಗಿಯವರಿಗೆ ರೈಲು ಓಡಿಸಲು ಅನುಮತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಯಾವುದೇ ವಿಶೇಷ ಪ್ರಯಾಣಿಕ ರೈಲುಗಳನ್ನು ಖಾಸಗಿ ಸೇವೆಗೆ ನೀಡುವುದಿಲ್ಲ' ಎಂದು ಲಿಖಿತ ಉತ್ತರದಲ್ಲಿ ಅವರು ತಿಳಿಸಿದ್ದಾರೆ.