ನವದೆಹಲಿ:ಭಾರತದ ಬ್ಯಾಂಕಿಂಗ್ ಕ್ಷೇತ್ರದ ಬಲವರ್ಧನೆಗೆ ಎಸ್ಬಿಐನ ಐದು ಸಹವರ್ತಿ ಹಾಗೂ ಬ್ಯಾಂಕ್ ಆಫ್ ಬರೋಡಾ, ವಿಜಯ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ಗಳ ಮಹಾ ವಿಲೀನದ ಬಳಿಕ ಮೂರನೇ ಸುತ್ತಿನ ಬ್ಯಾಂಕ್ಗಳ ವಿಲೀನ ಪ್ರಕ್ರಿಯೆ ಶೀಘ್ರದಲ್ಲೇ ಚಾಲನೆಗೊಳ್ಳಲಿದೆ.
ಹಲವು ಆರ್ಥಿಕ ತಜ್ಞರು, ಬ್ಯಾಂಕ್ ಗ್ರಾಹಕರು ಹಾಗೂ ಕಾರ್ಮಿಕ ಸಂಘಟನೆಗಳ ವಿರೋಧದ ನಡುವೆಯೂ ಎರಡು ವಿಧದ ವಿಲೀನ ಪ್ರಕ್ರಿಯೆ ಹಂತ ಹಂತವಾಗಿ ಕಾರ್ಯಗತಗೊಂಡಿದೆ. ಮೂರನೇ ಸುತ್ತಿನಲ್ಲಿ ಇನ್ನೊಂದು ಮಹಾವಿಲೀನಕ್ಕೆ ತೆರೆಮರೆಯಲ್ಲಿ ಸಿದ್ಧತೆಗಳು ನಡೆದಿವೆ. ಈ ಸಂಬಂಧ ಸರ್ಕಾರವು ಬ್ಯಾಂಕ್ ಮುಖ್ಯಸ್ಥರ ಜೊತೆ ಸದ್ಯದಲ್ಲೇ ಚರ್ಚೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ), ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಬ್ಯಾಂಕ್ ಆಫ್ ಇಂಡಿಯಾ (ಬಿಒಐ) ಸೇರಿದಂತೆ ಇತರೆ ಬ್ಯಾಂಕ್ಗಳ ಮುಖ್ಯಸ್ಥರನ್ನು ವಿಲೀನ ಸಂಬಂಧ ಸರ್ಕಾರವು ಆಹ್ವಾನಿಸಿ ಮಾತುಕತೆ ನಡೆಸುವ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದೆ.