ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಮಧ್ಯೆ ಏಪ್ರಿಲ್ 1 ಮತ್ತು ಜೂನ್ 30ರ ನಡುವೆ ವಾಯ್ದೆ ಹೊಂದಿರುವ ವಾಣಿಜ್ಯ ವಾಹನ ಗ್ರಾಹಕರಿಗೆ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿದೆ ಎಂದು ಟಾಟಾ ಮೋಟಾರ್ಸ್ ತಿಳಿಸಿದೆ.
ಕೋವಿಡ್-19 ವೈರಸ್ ಹರಡುವುದನ್ನು ತಡೆಯಲು ದೇಶಾದ್ಯಂತ ಹಲವು ರಾಜ್ಯ ಸರ್ಕಾರಗಳು ಘೋಷಿಸಿರುವ ನಿರ್ಬಂಧಗಳ ಹಿನ್ನೆಲೆಯಲ್ಲಿ, ಕಂಪನಿಯು 2021ರ ಏಪ್ರಿಲ್ 1ರಿಂದ ಜೂನ್ 30ರ ಅವಧಿ ನಡುವೆ ಮುಗಿಯುವ ತನ್ನ ಎಲ್ಲಾ ವಾಣಿಜ್ಯ ವಾಹನಗಳಿಗೆ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಟಾಟಾ ಮೋಟಾರ್ಸ್ ಪ್ರಕಟಣೆಯಲ್ಲಿ ಹೇಳಿದೆ.