ನವದೆಹಲಿ:ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಮತ್ತು ಪ್ರಗತಿಯ ಅವಲೋಕನವನ್ನು ಸಮರ್ಪಕವಾಗಿ ಕೇಂದ್ರ ಸರ್ಕಾರದೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಟ್ವಿಟರ್ ಹೇಳಿದೆ.
ಭಾರತದ ಕಾನೂನುಗಳಿಗೆ ಬದ್ಧವಾಗಿದ್ದೇವೆ. ಸರ್ಕಾರದ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಸಂಸ್ಥೆ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಭಾರತ ಸರ್ಕಾರದೊಂದಿಗೆ ನಮ್ಮ ರಚನಾತ್ಮಕ ಸಂವಾದ ಮುಂದುವರಿಸುತ್ತೇವೆ ಎಂದು ಟ್ವಿಟರ್ ವಕ್ತಾರರು ತಿಳಿಸಿದ್ದಾರೆ.