ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರಿಗೆ ಉಚಿತ ಮೆಟ್ರೋ ರೈಲು ಪ್ರಯಾಣಕ್ಕೆ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಕೇಂದ್ರ ಸರ್ಕಾರ ಸ್ವೀಕರಿಸಿಲ್ಲ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಮಹಿಳೆಯರಿಗೆ ಉಚಿತ ಪ್ರಯಾಣ ಕುರಿತು ದೆಹಲಿ ಸರ್ಕಾರ ಪ್ರಸ್ತಾವವನ್ನು ಕೇಂದ್ರಕ್ಕೆ ಸಲ್ಲಿಸಿದ್ದೇಯಾ ಎಂಬ ಪ್ರಶ್ನೆಗೆ, ಸಂಸತ್ನಲ್ಲಿ ಇಲ್ಲವೆಂದು ಲಿಖಿತ ಉತ್ತರ ನೀಡಿದ್ದಾರೆ. ಮೆಟ್ರೋ ಹಾಗೂ ನಗರ ಸಂಚಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಜಾರಿಗೆ ತರುವುದಾಗಿ ಎಎಪಿ ಸರ್ಕಾರ ಘೋಷಿಸಿತ್ತು.