ನವದೆಹಲಿ:ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ (ಡಿಇಎ) ಹೊಸ ಕಾರ್ಯದರ್ಶಿಯಾಗಿ ಅಜಯ್ ಸೇಠ್ ಇಂದು ಅಧಿಕಾರ ವಹಿಸಿಕೊಂಡರು.
ಸೇಠ್ ಕರ್ನಾಟಕ ಕೇಡರ್‌ನ 1987ರ ಬ್ಯಾಚ್ ಭಾರತೀಯ ಆಡಳಿತ ಸೇವಾ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು.
1987ರ ಬ್ಯಾಚ್ ಕರ್ನಾಟಕ ಕೇಡರ್‌ನ ಅಧಿಕಾರಿಯಾದ ಸೇಠ್ ಅವರ ಮೆಟ್ರೋ ರೈಲು ಅನುಭವವು ಕೇಂದ್ರ ಹಣಕಾಸು ಸಚಿವಾಲಯದಲ್ಲಿ ಉಪಯುಕ್ತವೆಂದು ಭಾವಿಸಿರಬಹುದು. ಈ ಸಮಯದಲ್ಲಿ 2021ರ ಹಣಕಾಸು ವರ್ಷದಲ್ಲಿ ದಾಖಲೆಯ ಸಂಕೋಚನದಿಂದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಸರ್ಕಾರವು ದೊಡ್ಡ ಬಂಡವಾಳದತ್ತ ಕೇಂದ್ರೀಕರಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ (ಎಸಿಸಿ) ನೇಮಕಾತಿ ಸಮಿತಿ ಈ ಬದಲಾವಣೆಗಳಿಗೆ ಅನುಮೋದನೆ ನೀಡಿತ್ತು.