ಪ್ರಯಾಗರಾಜ್:ರಾಂಪುರದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದಲ್ಲಿ ನಿರ್ಮಾಣಕ್ಕೆ ವಿಧಿಸಲಾದ ಸೆಸ್ ಸೇರಿ 4.08 ಕೋಟಿ ರೂ. ದಂಡ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ಮೌಲಾನಾ ಮೊಹಮ್ಮದ್ ಅಲಿ ಜೌಹರ್ ಟ್ರಸ್ಟ್ ತನ್ನ ಅಧ್ಯಕ್ಷ ಮೊಹಮ್ಮದ್ ಅಜಮ್ ಖಾನ್ ಮೂಲಕ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ. ಕಟ್ಟಡ ಮತ್ತು ಇತರ ನಿರ್ಮಾಣದ ಕಾರ್ಮಿಕರ ಕಲ್ಯಾಣ ಸೆಸ್ ಕಾಯ್ದೆ, 1996ರ ಅಡಿ ಸೆಸ್ ವಿಧಿಸುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅರ್ಜಿದಾರರಿಗೆ ಪರ್ಯಾಯ ಪರಿಹಾರವಿದೆ ಎಂದು ನ್ಯಾಯಮೂರ್ತಿ ಜೆ.ಜೆ. ಮುನೀರ್ ಹೇಳಿದರು.
ಇದನ್ನೂ ಓದಿ: ರಾಮ ಮಂದಿರ ನಿಧಿ ಕೇಳಲು ಸೋನಿಯಾ, ರಾಹುಲ್ ಮನೆಗೆ ಹೋಗ್ತಿನಿ, ಆದ್ರೆ ಒಂದು ಕಂಡಿಷನ್: ಗಿರಿ ಮಹಾರಾಜ