ನವದೆಹಲಿ: ಮುಂದಿನ ಮೂರು ತಿಂಗಳ ಅವಧಿವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಆಕ್ಸಿಜನ್ ಸಂಬಂಧಿತ ಉಪಕರಣಗಳ ಆಮದು ಮೇಲಿನ ಕಸ್ಟಮ್ಸ್ ಸುಂಕ ಮತ್ತು ಆರೋಗ್ಯ ಸೆಸ್‌ನಿಂದ ಸಂಪೂರ್ಣ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ಸಚಿವ ಡಾ.ಹರ್ಷ್ವರ್ಧನ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಮನೆಯಲ್ಲಿ ಆಗಲಿ ಮತ್ತು ಆಸ್ಪತ್ರೆಗಳಲ್ಲಿ ವೈದ್ಯಕೀಯ ದರ್ಜೆಯ ಆಮ್ಲಜನಕದ ಪೂರೈಕೆ ಮತ್ತು ರೋಗಿಗಳ ಆರೈಕೆಗೆ ಅಗತ್ಯವಾದ ಸಲಕರಣೆಗಳನ್ನು ತ್ವರಿತವಾಗಿ ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಪ್ರಧಾನಿ ಹೇಳಿದ್ದಾರೆ.