ಕರ್ನಾಟಕ

karnataka

ETV Bharat / business

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ: ತುಟ್ಟಿ ಭತ್ಯೆ ಏರಿಕೆ - ಕೇಂದ್ರ ಸಚಿವ ಸಂಪುಟ

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಂಪುಟ ಸಭೆಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, 48 ಲಕ್ಷ ಸರ್ಕಾರಿ ನೌಕರರು, 65 ಲಕ್ಷ ಪಿಂಚಣಿದಾರರಿಗೆ ತುಟ್ಟಿ ಭತ್ಯೆ( ಡಿಎ)ಯಲ್ಲಿ ಶೇ. 4ರಷ್ಟು ಹೆಚ್ಚಳಕ್ಕೆ ಅನುಮೋದನೆ ದೊರೆತಿದೆ ಎಂದು ಮಾಹಿತಿ ನೀಡಿದರು.

Prakash Javadekar
ಪ್ರಕಾಶ್ ಜಾವಡೇಕರ್

By

Published : Mar 13, 2020, 6:09 PM IST

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಶೇ. 4ರಷ್ಟು ಪ್ರಿಯ ಭತ್ಯೆ (Dearness allowance-DA) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ಪ್ರಿಯ ಭತ್ಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 14,595 ಕೋಟಿ ರೂ. ಹೊರೆಯಾಗಲಿದೆ.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಂಪುಟ ಸಭೆಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, 48 ಲಕ್ಷ ಸರ್ಕಾರಿ ನೌಕರರು ಮತ್ತು 65 ಲಕ್ಷ ಪಿಂಚಣಿದಾರರಿಗೆ ಡಿಎಯಲ್ಲಿ ಶೇ. 4ರಷ್ಟು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ದೊರೆತಿದೆ ಎಂದು ಮಾಹಿತಿ ನೀಡಿದರು.

ಈ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು 14,595 ಕೋಟಿ ರೂ. ಹೆಚ್ಚುವರಿ ವೆಚ್ಚವನ್ನು ಭರಿಸಲಿದೆ ಎಂದು ಅವರು ಹೇಳಿದರು.

ABOUT THE AUTHOR

...view details