ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಅಡಿಯಲ್ಲಿ ಮೂಲಸೌಕರ್ಯ ನಿರ್ಮಾಣಕ್ಕಾಗಿ ಕರ್ನಾಟಕದ ತುಮಕೂರು ಕೈಗಾರಿಕಾ ಕಾರಿಡಾರ್ಗೆ ಅನುಮೋದನೆ ನೀಡಿದೆ.
1,701.81 ಕೋಟಿ ರೂ. ಅಂದಾಜು ವೆಚ್ಚದ ಈ ಕೈಗಾರಿಕಾ ಕಾರಿಡಾರ್ನಿಂದಾಗಿ 88,500 ಮಂದಿ ಉದ್ಯೋಗ ಪಡೆಯಲಿದ್ದಾರೆ. ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಮೂಲಸೌಕರ್ಯ ನಿರ್ಮಾಣಕ್ಕಾಗಿ ಸಲ್ಲಿಸಿದ ಪ್ರಸ್ತಾವನೆಗಳನ್ನು ಸಂಪುಟ ಅನುಮೋದಿಸಿದೆ.