ನವದೆಹಲಿ:ರಾಜ್ಯ ನಿಯಂತ್ರಣವನ್ನು ಉಳಿಸಿಕೊಳ್ಳಲು ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮಗಳಲ್ಲಿನ (ಸಿಪಿಎಸ್‌ಇ) ಸರ್ಕಾರದ ಪಾಲನ್ನು ಶೇ.51ಕ್ಕಿಂತ ಕಡಿಮೆಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ತೆಗೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಬ್ಯಾಂಕ್ ಆಯ್ತು, ಈಗ ವಿಮಾ ಕಂಪನಿಗಳ ವಿಲೀನಕ್ಕೆ ಮೋದಿ ಸರ್ಕಾರ ಸಜ್ಜು..! - ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮಗಳ ಷೇರು
ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮಗಳಲ್ಲಿನ (ಸಿಪಿಎಸ್‌ಇ) ಸರ್ಕಾರದ ಪಾಲನ್ನು ಶೇ 51ಕ್ಕಿಂತ ಕಡಿಮೆಗೊಳಿಸುವ ಹಾಗೂ ಸಾರ್ವಜನಿಕ ವಲಯದ ವಿಮಾ ಕಂಪನಿಗಳ ವಿಲೀನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. 2018-19ರ ಬಜೆಟ್‌ನಲ್ಲಿ ಮೂರು ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳ ವಿಲೀನ ಮತ್ತು ಷೇರು ವಿನಿಮಯ ಕೇಂದ್ರದಲ್ಲಿ ವಿಲೀನ ಪಟ್ಟಿಯ ಬಗ್ಗೆ ಪ್ರಸ್ತಾಪಿಸಲಾಗಿತ್ತು.
ಇದರ ಜೊತೆಗೆ ಸಾರ್ವಜನಿಕ ವಲಯದ ವಿಮಾ ಕಂಪನಿಗಳ ವಿಲೀನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. 2018-19ರ ಬಜೆಟ್‌ನಲ್ಲಿ ಮೂರು ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳ ವಿಲೀನ ಮತ್ತು ಷೇರು ವಿನಿಮಯ ಕೇಂದ್ರದಲ್ಲಿ ವಿಲೀನ ಪಟ್ಟಿಯ ಬಗ್ಗೆ ಪ್ರಸ್ತಾಪಿಸಲಾಗಿತ್ತು.
ಕಳೆದ ವಾರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಹಿಂದಿನ ಬಜೆಟ್ಲ್ಲಿ ಘೋಷಿಸಿದಂತೆ ಮೂರು ಸರ್ಕಾರಿ ಸ್ವಾಮ್ಯದ ಸಾಮಾನ್ಯ ವಿಮಾ ಕಂಪನಿಗಳಾದ ನ್ಯಾಷನಲ್ ಇನ್ಶುರೆನ್ಸ್ ಕಂಪನಿ, ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಮತ್ತು ಓರಿಯಂಟಲ್ ಇನ್ಶುರೆನ್ಸ್ ಕಂಪನಿಗಳ ವಿಲೀನದ ಬಗ್ಗೆ ಸರ್ಕಾರ ಹಿಂದಕ್ಕೆ ಸರಿಯುವುದಿಲ್ಲ ಎಂದು ಹೇಳಿದ್ದರು.