ಕರ್ನಾಟಕ

karnataka

ದೀಪಾವಳಿ ಹಬ್ಬಕ್ಕೆ ರೈತರಿಗೆ ಮೋದಿ ಸರ್ಕಾರದಿಂದ ಬಂಪರ್​ ಕೊಡುಗೆ.. ಏನದು ಗೊತ್ತೆ?

By

Published : Oct 23, 2019, 4:40 PM IST

ಕೇಂದ್ರ ಸರ್ಕಾರ ತನ್ನ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಇತ್ತೀಚೆಗೆ ಗಿಫ್ಟ್ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಶೇ 5ರಷ್ಟು ಹೆಚ್ಚಿಸಲು ಕೇಂದ್ರ ಸಂಪುಟ ಸಭೆ ಒಪ್ಪಿಗೆ ನೀಡಿತ್ತು. ಇದೀಗ ರೈತರಿಗೆ ಸಿಹಿ ಸುದ್ದಿಯನ್ನು ಕೇಂದ್ರ ಸರ್ಕಾರ ನೀಡಿದೆ. 2019-20ರ ಕೃಷಿ ವರ್ಷದಲ್ಲಿ ಗೋಧಿ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕ್ವಿಂಟಲ್​ಗೆ 85 ರೂ. ಏರಿಕೆ ಸೇರಿದಂತೆ ದ್ವಿದಳ ಧಾನ್ಯಗಳ ಬೆಂಬಲ ಬೆಲೆ ಹೆಚ್ಚಿಸಲು ಪ್ರಧಾನಿ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ನಿರ್ಧರಿಸಿದೆ.

ಸಾಂದರ್ಭಿಕ ಚಿತ್ರ

ನವದೆಹಲಿ: ಕೇಂದ್ರ ಸರ್ಕಾರವು ರೈತರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿ ನೀಡಿದೆ. 2019-20ನೇ ಕೃಷಿ ವರ್ಷದಲ್ಲಿ ಗೋಧಿ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕ್ವಿಂಟಲ್​ಗೆ 85 ರೂ. ಏರಿಕೆ ಸೇರಿದಂತೆ ದ್ವಿದಳ ಧಾನ್ಯಗಳ ಬೆಂಬಲ ಬೆಲೆ ಹೆಚ್ಚಿಸಲು ಪ್ರಧಾನಿ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ತೀರ್ಮಾನಿಸಿದೆ.

ಕೇಂದ್ರ ಸರ್ಕಾರ ತನ್ನ ನೌಕರರಿಗೆ ಇತ್ತೀಚೆಗೆ ದೀಪಾವಳಿ ಹಬ್ಬದ ಕೊಡುಗೆ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಶೇ. 5ರಷ್ಟು ಹೆಚ್ಚಿಸಲು ಕೇಂದ್ರ ಸಂಪುಟ ಸಭೆ ಒಪ್ಪಿಗೆ ನೀಡಿತ್ತು. ಈ ಬಳಿಕ ರೈತರಿಗೆ ಸಿಹಿ ಸುದ್ದಿಯನ್ನು ನೀಡುತ್ತಿದೆ.

ಗೋಧಿಗೆ ಕನಿಷ್ಠ ಬೆಂಬಲ ಬೆಲೆ ಅನ್ನು ಕ್ವಿಂಟಲ್‌ಗೆ 85 ರೂ. ಹೆಚ್ಚಿಸಿ 1,925 ರೂ.ಗೆ ಮತ್ತು ದ್ವಿದಳ ಧಾನ್ಯಗಳನ್ನು ಕ್ವಿಂಟಲ್‌ಗೆ 325 ರೂ.ಗೆ ಹೆಚ್ಚಿಸಿದೆ. ಸರ್ಕಾರದ ಕೃಷಿ ಬೆಲೆ ಸಲಹಾ ಸಂಸ್ಥೆ ಸಿಎಸಿಪಿ ಶಿಫಾರಸು ಮಾಡಿದಂತೆ 2019-20ರ ಬೆಳೆ ವರ್ಷಕ್ಕೆ (ಜೂನ್-ಜುಲೈ) ಎಲ್ಲ ರಬಿ (ಚಳಿಗಾಲ-ಬಿತ್ತನೆ) ಬೆಳೆಗಳ ಎಂಎಸ್‌ಪಿಗಳನ್ನು ಸಿಸಿಇಎ ಅನುಮೋದಿಸಿದೆ ಎಂದು ಮೂಲಗಳು ತಿಳಿಸಿವೆ.

ABOUT THE AUTHOR

...view details