ಭುವನೇಶ್ವರ: ಕೋವಿಡ್ ಬಳಿಕ ಹೆಚ್ಚುತ್ತಿರುವ ಆರ್ಥಿಕ ಚಟುವಟಿಕೆಗಳೊಂದಿಗೆ ಒಣ ಇಂಧನದ ಬೇಡಿಕೆ ಹೆಚ್ಚಾಗುವ ನಿರೀಕ್ಷೆ ಇರುವುದರಿಂದ ದೇಶದಲ್ಲಿ ಕಲ್ಲಿದ್ದಲು ಉತ್ಪಾದನೆ ಹೆಚ್ಚಿಸಬೇಕಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಡಿಶಾದ ಸಿಐಎಲ್ನ ಅಂಗಸಂಸ್ಥೆ ಮಹಾನದಿ ಕೋಲ್ಪೋಲ್ಡ್ಸ್ ಲಿಮಿಟೆಡ್ (ಎಂಸಿಎಲ್) ಟಾಲ್ಚರ್ ಬೆಲ್ಟ್ನಲ್ಲಿ ಅಗ್ರವಾಲ್ ಗಣಿಗಾರಿಕೆ ಕಾರ್ಯಾಚರಣೆ ಪರಿಶೀಲಿಸಿ ಬಳಿಕ ಮಾತನಾಡಿದ, ಕೋಲ್ ಇಂಡಿಯಾ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪ್ರಮೋದ್ ಅಗ್ರವಾಲ್, ಗಣಿಗಾರಿಕೆ ನಡೆಸುತ್ತಿರುವವರು ದೇಶದ ಉತ್ಪಾದನಾ ಅಗತ್ಯ ಪೂರೈಸಲು ಬದ್ಧವಾಗಿದ್ದಾರೆ. ಅವರೆಲ್ಲ ಉತ್ಪಾದನೆ ಹೆಚ್ಚಿಸಲು ಒತ್ತು ನೀಡುತ್ತಿದ್ದಾರೆ ಎಂದರು.
ಕೋವಿಡ್ ನಂತರದ ಅವಧಿಯಲ್ಲಿ ಹೆಚ್ಚುತ್ತಿರುವ ಕೈಗಾರಿಕಾ ಚಟುವಟಿಕೆಗಳಿಂದಾಗಿ ಒಣ ಇಂಧನಕ್ಕೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ಕಲ್ಲಿದ್ದಲು ಗಣಿಗಾರಿಕೆ ಉದ್ಯಮ ಬೇಡಿಕೆ ಪೂರೈಸಲು ಅಧಿಕ ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.