ಮುಂಬೈ:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ನ (ಪಿಎಂಸಿ) ಗ್ರಾಹಕರನ್ನು ಭೇಟಿ ಮಾಡಿ, ಅವರ ಅಹವಾಲುಗಳ ಸ್ವೀಕರಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ಪಿಎಂಸಿ ಬ್ಯಾಂಕ್ ಗ್ರಾಹಕರ ಸಮಸ್ಯೆ ಇತ್ಯರ್ಥಕ್ಕೆ ವಿತ್ತ ಸಚಿವಾಲಯ ಸಿದ್ಧವಿದೆ: ನಿರ್ಮಲಾ ಸೀತಾರಾಮನ್ - Finance Minister Nirmala Sithraman
ಅಕ್ಟೋಬರ್ 21ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಪಿಎಂಸಿ ಬ್ಯಾಂಕ್ ಬಗ್ಗೆ ಸ್ಪಷ್ಟನೆ ನೀಡಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂಬೈಗೆ ಭೇಟಿ ನೀಡಿದ್ದಾರೆ. ಪಕ್ಷದ ರಾಜ್ಯ ಪ್ರಧಾನ ಕಚೇರಿಗೆ ಭೇಟಿ ನೀಡಿದ ವೇಳೆ ಬ್ಯಾಂಕ್ ಗ್ರಾಹಕರು ಪ್ರತಿಭಟನೆ ನಡೆಸಿದರು. ಕೂಡಲೇ ಗ್ರಾಹಕ ಸಭೆ ಕರೆದು ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಆಶ್ವಾಸನೆ ನೀಡಿದ್ದಾರೆ.
ಅಕ್ಟೋಬರ್ 21ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಪಿಎಂಸಿ ಬ್ಯಾಂಕ್ ಬಗ್ಗೆ ಸ್ಪಷ್ಟನೆ ನೀಡಲು ಮುಂಬೈಗೆ ಭೇಟಿ ನೀಡಿದ್ದಾರೆ. ಪಕ್ಷದ ರಾಜ್ಯ ಪ್ರಧಾನ ಕಚೇರಿಗೆ ಭೇಟಿ ನೀಡಿದ ವೇಳೆ ಬ್ಯಾಂಕ್ ಗ್ರಾಹಕರು ಪ್ರತಿಭಟನೆ ನಡೆಸಿದರು. ಕೂಡಲೇ ಗ್ರಾಹಕ ಸಭೆ ಕರೆದು ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಆಶ್ವಾಸನೆ ನೀಡಿದ್ದಾರೆ.
ಆರ್‌ಬಿಐ ನಿಯಂತ್ರಕ ಆಗಿರುವುದರಿಂದ ಹಣಕಾಸು ಸಚಿವಾಲಯವು ನೇರವಾಗಿ (ಪಿಎಮ್‌ಸಿ ಬ್ಯಾಂಕ್ ಮ್ಯಾಟರ್) ಯಾವುದೇ ಸಂಬಂಧ ಹೊಂದಿರುವುದಿಲ್ಲ. ಆದರೆ, ನನ್ನ ಕಡೆಯಿಂದ, ನನ್ನ ಸಚಿವಾಲಯದ ಕಾರ್ಯದರ್ಶಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನಗರಾಭಿವೃದ್ಧಿ ಸಚಿವಾಲಯದೊಂದಿಗೆ ಏನಾಗುತ್ತಿದೆ ಎಂಬುದರ ಕುರಿತು ವಿವರದ ಅಧ್ಯಯನ ನಡೆಸಲು ಸೂಚಿಸುತ್ತೇನೆ. ಆರ್‌ಬಿಐ ಗವರ್ನರ್ ಅವರ ಜೊತೆಗೆ ಈ ಬಗ್ಗೆ ತುರ್ತು ಸಭೆ ಕರೆದು ಮಾತನಾಡುತ್ತೇನೆ ಎಂದರು.