ನವದೆಹಲಿ: ಇ-ಕಾಮರ್ಸ್ ದೈತ್ಯರು ಮತ್ತು ಭಾರತೀಯ ವರ್ತಕರ ನಡುವಿನ ವಾಣಿಜ್ಯ ಸಮರದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಅಮೆಜಾನ್ ಮತ್ತು ವಾಲ್ಮಾರ್ಟ್ ಒಡೆತನದ ಫ್ಲಿಪ್‌ಕಾರ್ಟ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ಗೆ ನಿರ್ದೇಶನ ನೀಡಿದೆ.
ಈ ಕಂಪನಿಗಳು ಎಫ್‌ಡಿಐ ನೀತಿ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ 1999 (ಫೆಮಾ) ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಖಿಲ ಭಾರತ ವರ್ತಕರ ಒಕ್ಕೂಟ (ಸಿಎಐಟಿ) ಹಲವು ದೂರುಗಳ ಸ್ವೀಕರಿಸಿದ ಬಳಿಕ ಕೇಂದ್ರವು ಈ ನಿರ್ದೇಶನ ನೀಡಿದೆ.