ನವದೆಹಲಿ:ದ್ವಿಚಕ್ರ ವಾಹನಗಳಿಂದ ಸಂಭವಿಸುವ ಮಾರಣಾಂತಿಕ ಗಾಯಗಳನ್ನು ತಗ್ಗಿಸುವ ಪ್ರಯತ್ನದ ಭಾಗವಾಗಿ ಹೆಲ್ಮೆಟ್‌ಗಳನ್ನು ಕಡ್ಡಾಯವಾಗಿ ಬಿಐಎಸ್ ಮಾನದಂಡದ ವ್ಯಾಪ್ತಿಗೆ ತರುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.
ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ದ್ವಿಚಕ್ರ ವಾಹನ ಸವಾರರಿಗೆ ಬಿಐಎಸ್ ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ಭಾರತದಲ್ಲಿ ತಯಾರಿಸಿ ಮಾರಾಟ ಮಾಡಲಾಗುತ್ತದೆ.
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಕಾಯ್ದೆ 2016ರ ಪ್ರಕಾರ, ಕಡ್ಡಾಯ ಪ್ರಮಾಣೀಕರಣದಡಿಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ರಕ್ಷಣಾತ್ಮಕ ಹೆಲ್ಮೆಟ್‌ಗಳನ್ನು ತರಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕರಡು ಅಧಿಸೂಚನೆ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.