ನವದೆಹಲಿ:2024-25ರ ವೇಳೆಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ತಲುಪಬೇಕಾದರೆ ದೇಶದಲ್ಲಿ ಜಾಗತಿಕ ಮಟ್ಟದ ಬ್ಯಾಂಕ್ಗಳ ಅವಶ್ಯಕತೆ ಇದೆ ಎಂದು ಮುಖ್ಯ ಅರ್ಥಶಾಸ್ತ್ರ ಸಲಹೆಗಾರ ಕೆ ವಿ ಸುಬ್ರಮಣಿಯನ್ ಹೇಳಿದ್ದಾರೆ.
ಟಾಪ್-100 ಜಾಗತಿಕ ಬ್ಯಾಂಕ್ಗಳ ಪಟ್ಟಿಯಲ್ಲಿ ಭಾರತದ ಕೇವಲ ಒಂದು ಬ್ಯಾಂಕ್ ಇದೆ. 55ನೇ ಸ್ಥಾನದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಈ ಪಟ್ಟಿಯಲ್ಲಿರುವ ಭಾರತದ ಏಕೈಕ ಬ್ಯಾಂಕ್ ಆಗಿದೆ. ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಿದೆ. ಭಾರತೀಯ ಬ್ಯಾಂಕಿಂಗ್ ಕ್ಷೇತ್ರವು ತನ್ನ ಆರ್ಥಿಕತೆಯ ಗಾತ್ರಕ್ಕೆ ಸಮನಾಗಿದ್ದಿದ್ದರೆ ಟಾಪ್ 100 ಜಾಗತಿಕ ಬ್ಯಾಂಕ್ಗಳ ಪಟ್ಟಿಯಲ್ಲಿ ಆರು ಬ್ಯಾಂಕ್ಗಳನ್ನು ಹೊಂದಿರುವ ದಕ್ಷಿಣ ಕೊರಿಯಾದ ಸ್ಥಾನದಲ್ಲಿ ಭಾರತ ಇರಬೇಕಿತ್ತು ಎಂದು ಸುಬ್ರಮಣಿಯನ್ ತಿಳಿಸಿದ್ದಾರೆ.