ನವದೆಹಲಿ:ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಒತ್ತು ನೀಡಿರುವ ಕೇಂದ್ರ ಮಾಲಿನ್ಯ ಮುಕ್ತವಾಗಿಸುವ ಪಣತೊಟ್ಟಿದೆ. ಇದಕ್ಕಾಗಿ ಹೊಸ ಹೊಸ ಎಲೆಕ್ಟ್ರಿಕ್ ವಾಹನ ಕಂಪನಿಗಳು ಭಾರತದಲ್ಲಿ ಕಾರ್ಯಾರಂಭ ಮಾಡಿದೆ.
ಅಮೆರಿಕದ ಅತೀ ದೊಡ್ಡ ಎಲೆಕ್ಟ್ರಿಕ್ ವಾಹನ ತಯಾರಿಕಾ ಘಟಕ ಟೆಸ್ಲಾ ಭಾರತದಲ್ಲಿ ಕಾರು ಬಿಡುಗಡೆಗೆ ಕಳೆದ ಹಲವು ವರ್ಷಗಳಿಂದ ಪ್ರಯತ್ನ ನಡೆಸುತ್ತಿದೆ. ಇತ್ತೀಚೆಗೆ ಟ್ವಿಟರ್ ಮೂಲಕ ಕೆಲ ಘರ್ಷಣೆಗಳು ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಮಾಹಿತಿ ಪ್ರಕಾರ ಟೆಸ್ಲಾ ಮಾಡಿದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.
ಟೆಸ್ಲಾ ಕಾರುಗಳ ಆಮದು, ಬಿಡಿ ಭಾಗಗಳ ಆಮದಿಗೆ ಸುಂಕ ಕಡಿತಗೊಳಿಸಲು ಟೆಸ್ಲಾ ಮನವಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕಾರಣ ಈಗಾಗಲೇ ಹಲವು ವಿದೇಶಿ ಕಂಪನಿಗಳು ಭಾರತದ ತೆರಿಗೆ ನೀತಿ ಮೂಲಕ ವ್ಯವಹಾರ ನಡೆಸುತ್ತಿದೆ. ಬಿಡಿ ಭಾಗಗಳ ಆಮದು ಮಾಡಿಕೊಳ್ಳಲು ಸದ್ಯ ಚಾಲ್ತಿಯಲ್ಲಿರುವ ನೀತಿಯನ್ನು ಒಪ್ಪಿಕೊಂಡಿದೆ. ಹೀಗಾಗಿ ಇತರ ಕಂಪನಿಗಳಿಗೆ ನೀಡದ ವಿನಾಯಿತಿ, ಕೇವಲ ಟೆಸ್ಲಾಗೆ ನೀಡಲು ಸಾಧ್ಯವಿಲ್ಲ ಎಂದು ವಿವೇಕ್ ಜೋಹ್ರಿ ಹೇಳಿದ್ದಾರೆ.
ಟೆಸ್ಲಾ ಹಾಗೂ ಕೇಂದ್ರ ಸರ್ಕಾರದ ನಡುವೆ ಕಳೆದ ಕೆಲ ವರ್ಷಗಳಿಂದಲೇ ತೆರಿಗೆ ನೀತಿ ಕುರಿತು ಹಗ್ಗಜಗ್ಗಾಟ ನಡೆಯುತ್ತಿದೆ. ಆಮದು ಸುಂಕ ಹಾಗೂ ಇತರ ತೆರಿಗೆ ಹೆಚ್ಚಿರುವ ಕಾರಣ ಟೆಸ್ಲಾ ಕಾರು ಭಾರತದಲ್ಲಿ ಅತ್ಯಂತ ದುಬಾರಿ ಕಾರಾಗಿ ಮಾರ್ಪಡಲಿದೆ. ಇದರಿಂದ ಟೆಸ್ಲಾ ಭಾರತದಲ್ಲಿ ಮಾರಾಟ ತೀರಾ ಕಡಿಮೆ ಆಗಿರಲಿದೆ.
ಇದನ್ನೂ ಓದಿ:ಸ್ಪೇಸ್ ಎಕ್ಸ್, ಟೆಸ್ಲಾ ಸಿಇಒ ಎಲಾನ್ ಮಸ್ಕ್ ಟೈಮ್ ನಿಯತಕಾಲಿಕೆಯ 'ವರ್ಷದ ವ್ಯಕ್ತಿ'
ಹೀಗಾಗಿ ಟೆಸ್ಲಾ ಎಲೆಕ್ಟ್ರಿಕ್ ಕಾರುಗಳ ಆಮದಿಗೆ ಸುಂಕ ಹಾಗೂ ಇತರ ತೆರಿಗೆ ಕಡಿತಗೊಳಿಸಬೇಕು ಎಂದು ಟೆಸ್ಲಾ ಮನವಿ ಮಾಡಿದೆ. ಇದೀಗ ಟೆಸ್ಲಾ ಮನವಿಯನ್ನು ಕೇಂದ್ರ ಸರ್ಕಾರ ತರಿಸ್ಕರಿಸಿರುವುದಾಗಿ ಸೆಂಟ್ರಲ್ ಬೋರ್ಡ್ ಆಫ್ ಇಂಡೈರೆಕ್ಟ್ ಟ್ಯಾಕ್ಸ್ ಹಾಗೂ ಕಸ್ಟಮ್ ಮುಖ್ಯಸ್ಥ ವಿವೇಕ್ ಜೋಹ್ರಿ ಹೇಳಿದ್ದಾರೆ.
ಸಂದರ್ಶನದಲ್ಲಿ ಎಲಾನ್ ಮಸ್ಕ್ ಭಾರತದಲ್ಲಿ ಟೆಸ್ಲಾ ಕಾರು ಬಿಡುಗಡೆ ತೊಡಕನ್ನು ಹೇಳಿದ್ದರು. ಅಮೆರಿಕದಲ್ಲಿ ಟೆಸ್ಲಾದ ಮಾಡೆಲ್ 3 ಕಾರಿನ ಬೆಲೆ 30 ಲಕ್ಷ ರೂಪಾಯಿ(ಭಾರತೀಯ ರೂ.ಗಳಲ್ಲಿ). ಭಾರತದಲ್ಲಿನ ಈ ಕಾರಿನ ಬೆಲೆ ತೆರಿಗೆ ಕಾರಣದಿಂದ ಸರಿಸುಮಾರು 60 ಲಕ್ಷ ರೂ.ಆಗಲಿದೆ. ಕಾರಣ ಆಮದು ಸುಂಕ ಹಾಗೂ ಇತರ ತೆರಿಗೆ ಶೇ.100. ಹೀಗಾಗಿ ಕೈಗೆಟುಕುವ ದರದ ಟೆಸ್ಲಾ ಕಾರು ಭಾರತದಲ್ಲಿ ದುಬಾರಿಯಾಗಲಿದೆ. ಹೀಗಾಗಿ ತೆರಿಗೆ ಕಡಿತಗೊಳಿಸಬೇಕು ಎಂದು ಮನವಿ ಮಾಡಲಾಗಿತ್ತು.