ನವದೆಹಲಿ :ಪ್ರಸ್ತುತ ಆರ್ಥಿಕ ವರ್ಷದಲ್ಲಿ ಶೇ.9.2ರಷ್ಟು ಬೆಳವಣಿಗೆ ದರವನ್ನು ನಿರೀಕ್ಷಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.
2022-23ರಲ್ಲಿ ದೇಶದ ಬೆಳವಣಿಗೆ ದರ ಶೇ.9.2ರಷ್ಟು ನಿರೀಕ್ಷೆ.. ಸಚಿವೆ ನಿರ್ಮಲಾ ಸೀತಾರಾಮನ್
ಮುಂದಿನ 25 ವರ್ಷಗಳ ಬೆಳವಣಿಗೆ ಗುರಿಯನ್ನು ಬಜೆಟ್‌ನಲ್ಲಿ ಮಂಡಿಸಲಾಗುತ್ತಿದೆ. 2022-23ರಲ್ಲಿ ದೇಶದ ಬೆಳವಣಿಗೆ ದರವನ್ನು ಶೇ.9.5ರಷ್ಟು ನಿರೀಕ್ಷೆ ಮಾಡಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ..
2022-23ರಲ್ಲಿ ದೇಶದ ಬೆಳವಣಿಗೆ ದರ ಶೇ. 9.2ರಷ್ಟು ನಿರೀಕ್ಷೆ - ಸಚಿವೆ ನಿರ್ಮಲಾ ಸೀತಾರಾಮನ್
ಕೋವಿಡ್‌ನಿಂದಾಗಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದು, ಮುಂದಿನ 25 ವರ್ಷಗಳ ಅಭಿವೃದ್ಧಿ ಗುರಿಯ 'ಅಮೃತ್ ಕಲ್' ಮೇಲೆ ಅಡಿಪಾಯ ಹಾಗೂ ಆರ್ಥಿಕತೆ ಗುರಿಯ ನೀಲನಕ್ಷೆ ಸಿದ್ಧವಾಗಿದೆ. ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಳ ಸೃಷ್ಟಿಸಲಾಗುವುದು ಎಂದು ಹೇಳಿದ್ದಾರೆ.
ಏರ್ ಇಂಡಿಯಾ ಮೇಲಿನ ಬಂಡವಾಳ ಹಿಂತೆಗೆತ ಪೂರ್ಣವಾಗಿದೆ. ಮುಂದಿನ 3 ವರ್ಷಗಳಲ್ಲಿ 400 ಒಂದೇ ಭಾರತ್ ಹೊಸ ರೈಲುಗಳ ಸೇವೆ ಆರಂಭವಾಗಲಿದೆ ಎಂದು ಸಚಿವೆ ಸೀತಾರಾಮನ್ ತಿಳಿಸಿದ್ದಾರೆ.
Last Updated : Feb 1, 2022, 11:49 AM IST