ಬೆಂಗಳೂರು: ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕ, ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಸೇರಿದಂತೆ 12 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಕರ್ನಾಟಕ ಭೂ ಕಬಳಿಕೆ ನಿಷೇಧ ಸೇರಿ 12 ವಿಧೇಯಕಗಳ ಮಂಡನೆ - ವಿಧಾನಸಭೆಯಲ್ಲಿ ಭೂ ಕಬಳಿಕೆ ನಿಷೇಧ ತಿದ್ದುಪಡಿ ಕಾಯ್ದೆ ಮಂಡನೆ
ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕ, ಕರ್ನಾಟಕ ನಗರಪಾಲಿಕೆಗಳ (ಎರಡನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ ಸೇರಿದಂತೆ 12 ಮಸೂದೆಗಳನ್ನು ಮಂಡಿಸಲಾಯಿತು.
ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕ, ಕರ್ನಾಟಕ ನಗರಪಾಲಿಕೆಗಳ (ಎರಡನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ, ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ)ವಿಧೇಯಕ, ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ, ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕಗಳನ್ನು ಸರ್ಕಾರ ಮಂಡಿಸಿತು.