ನವದೆಹಲಿ:ಅಂತಾರಾಷ್ಟ್ರೀಯ ಹಣಕಾಸು ನಿಧಿಯು ಇತ್ತೀಚೆಗೆ ಭಾರತೀಯ ಆರ್ಥಿಕತೆ ಚೇತರಿಕೆ ಬಗ್ಗೆ ತನ್ನ ಅಂದಾಜಿತ ವರದಿ ಸಲ್ಲಿಸಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದರು.
ಮುಂದಿನ ಆರ್ಥಿಕ ವರ್ಷದಲ್ಲಿ ಶೇ 11.5ರಷ್ಟು ಬೆಳವಣಿಗೆಯೊಂದಿಗೆ ಭಾರತದ ಆರ್ಥಿಕತೆಯು ಬಲವಾಗಿ ಪುಟಿದೇಳುವ ನಿರೀಕ್ಷೆಯಿದೆ. ಸಾಂಕ್ರಾಮಿಕ ರೋಗದಿಂದ ಉಂಟಾದ ಹಾನಿಯ ನಂತರ 2021ರಲ್ಲಿ ಜಾಗತಿಕ ಮಟ್ಟದಲ್ಲಿ ತೀವ್ರ ಚೇತರಿಕೆ ಕಂಡುಬರುತ್ತದೆ ಎಂದು ಐಎಂಎಫ್ ಹೇಳಿತ್ತು.
ನಿಧಾನಗತಿಯ ಜಾಗತಿಕ ಆರ್ಥಿಕತೆ ಹಾಗೂ ಕೊರೊನಾ ಪ್ರೇರೇಪಿತ ಲಾಕ್ಡೌನ್ನಿಂದಾಗಿ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿದ್ದ ಭಾರತದ ಆರ್ಥಿಕತೆ ಮೈನಸ್ಗೆ ಕುಸಿದಿದೆ. ಇದೇ ಆವೇಗವನ್ನು ಕಾಯ್ದುಕೊಳ್ಳಲು ವಿಫಲವಾದ ಮೋದಿ ಆಡಳಿತದ ವೈಖರಿಯನ್ನು ರಾಹುಲ್ ಗಾಂಧಿ ಟೀಕಿಸಿದ್ದಾರೆ.